ಬೆಂಗಳೂರು: ಕರ್ನಾಟಕ ರಾಜಕೀಯ ತಿಕ್ಕಾಟಕ್ಕೆ ಇಂದು ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪುವ ಟ್ವಿಸ್ಟ್ ನೀಡುವ ಸಾಧ್ಯತೆ ಇದ್ದು, ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಅತೃಪ್ತರ ಭವಿಷ್ಯ ಇಂದು ಬೆಳಗ್ಗೆ ನಿರ್ಧಾರವಾಗಲಿದೆ.
ರಾಜ್ಯದ ಮೈತ್ರಿ ಸರ್ಕಾರದ ಅಳಿವು, ಉಳಿವಿನ ಪ್ರಶ್ನೆಯಾಗಿರುವ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆಗೆ ಸಂಬಂಧಿತ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ನೀಡಲಿದ್ದು, ಇಂದು ಬೆಳಗ್ಗೆ 10.30ಕ್ಕೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠ ತನ್ನ ತೀರ್ಪು ಪ್ರಕಟಿಸಲಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿತ್ತು. ಇಂದು ಪ್ರಕರಣದ ತೀರ್ಪು ಪ್ರಕಟಿಸಲಿದೆ. ಹೀಗಾಗಿ ಇಡೀ ದೇಶದ ಚಿತ್ತ ಇದೀಗ ಸುಪ್ರೀಂ ಕೋರ್ಟ್ ನತ್ತ ನೆಟ್ಟಿದೆ.