ರಾಜ್ಯ

ಬೆಂಗಳೂರು:ಹೃದಯಾಘಾತದಿಂದ ಯುವಕ ದುರ್ಮರಣ,ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

Nagaraja AB
ಬೆಂಗಳೂರು: 27 ವರ್ಷದ ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತಾ ಮಂಡಳಿ ವಿರುದ್ಧ ಮೃತನ ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ವಿಲ್ಸನ್ ಗಾರ್ಡನ್ನಿನ ಅಗಡಿ ಆಸ್ಪತ್ರೆ ಮುಂಭಾಗ  ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಗಿತ್ತು.
ಸಿದ್ಧಗುಂಟೆ ಪಾಳ್ಯದ ನಿವಾಸಿ ಗೌತಮ್ ಗಿರೀಶ್ ಮೃತ ಯುವಕ. ಹೃದಯ ಘಾತ ಸಂಭವಿಸಿದ್ದರಿಂದ ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ವೈದ್ಯರ ನಿರ್ಲಕ್ಷದಿಂದಾಗಿ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮೃತನ ಕುಟುಂಬ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರಿಂದ ಆ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಈ ಹಿಂದೆ ಕೂಡಾ ಗಿರೀಶ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ತಿಳಿಸಿರುವ ಪೊಲೀಸರು, ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ. ವರದಿ ಬಂದ ನಂತರ ವೈದ್ಯರು ಮತ್ತು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗೆ ವೈದ್ಯರ ಬದಲಿಗೆ ವಾರ್ಡ್ ನಲ್ಲಿದ್ದ ಭದ್ರತಾ ಸಿಬ್ಬಂದಿ ನೆರವು ನೀಡುತ್ತಿದ್ದ ಎಂದು ಗಿರೀಶ್ ಸಂಬಂಧಿಕರು ಆರೋಪಿಸಿದ್ದಾರೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸರು ನಿಗೂಢ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಗಿರೀಶ್, 10 ವರ್ಷದಿಂದ ಕನ್ನಡ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ.  ಹೆಚ್ಚಿನ ರೀತಿಯ ಹೃದಯಾಘಾತದಿಂದಾಗಿ ಗಿರೀಶ್ ನನ್ನು ಐಸಿಯುಗೆ ಸ್ಥಳಾಂತರ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿಲ್ಲ  ಎಂದು ಅಗಡಿ ಆಸ್ಪತ್ರೆ ವೈದ್ಯ ಡಾ. ಅನಿಲ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
SCROLL FOR NEXT