ರಾಜ್ಯ

ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು: ಕಟ್ಟಡ ಬೈಲಾ ತಿದ್ದುಪಡಿಗೆ ತಿಲಾಂಜಲಿ?

Sumana Upadhyaya
ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟು ಹಲವು ಕೆಲಸ ಕಾರ್ಯಗಳಿಗೆ ಅಡ್ಡಿಯನ್ನುಂಟುಮಾಡಿದೆ. ಕಟ್ಟಡ ಬೈ-ಲಾ ನಿಯಮಗಳಿಗೆ ತಿದ್ದುಪಡಿ ಅವುಗಳಲ್ಲಿ ಒಂದಾಗಿದೆ. 
ಹೊಸದಾಗಿ ನಿರ್ಮಾಣವಾಗುವ ಅಪಾರ್ಟ್ ಮೆಂಟ್ ಗಳಲ್ಲಿ ನಿರ್ದಿಷ್ಟ ಜಾಗವನ್ನು ಎಲೆಕ್ಟ್ರಿಕ್ ವಾಹನಗಳ ನಿಲುಗಡೆ ಮತ್ತು ಅವುಗಳನ್ನು ಸೌರ ವಿದ್ಯುತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆ ಒದಗಿಸಬೇಕೆಂಬುದು ಈ ನಿಯಮವಾಗಿದೆ.
ನಿರ್ಮಾಣ ಹಂತದ ಕಟ್ಟಡಗಳಲ್ಲಿ ಈ ನಿಯಮವನ್ನು ಕಡ್ಡಾಯಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಪ್ರಸ್ತಾವನೆಯನ್ನು ರಚಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೌರ ನೀತಿಯನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿನ ವಾಯುಮಾಲಿನ್ಯವನ್ನು ನಿಯಂತ್ರಿಸಲು ವಿದ್ಯುತ್ ಚಾಲಿತ ವಾಹನ ಬಳಕೆಯನ್ನು ಪ್ರೋತ್ಸಾಹಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. 
ಈ ಬೈ-ಲಾ ತಿದ್ದುಪಡಿ ಮೂಲಕ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬುದು ಇಂಧನ ಇಲಾಖೆಯ ಉದ್ದೇಶವಾಗಿದೆ. 
ರಾಜ್ಯದಲ್ಲಿನ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟಿನಿಂದಾಗಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ರಾಜಕೀಯ ನಾಯಕರು ಕೇವಲ ತಮ್ಮ ಸ್ವಾರ್ಥ ರಾಜಕಾರಣದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ. 
SCROLL FOR NEXT