ಸೋಮವಾರಪೇಟೆ: ಲಾರಿಗೆ ಕಾರು ಡಿಕ್ಕಿ, ಬೆಂಗಳೂರಿನ ಇಬ್ಬರ ಸಾವು
ಸೋಮವಾರಪೇಟೆ: ಕಾರು ಚಾಲಕನೋರ್ವ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಗ್ಯಾಸ್ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಸುಂಟಿಕೊಪ್ಪದ ಬಾಳೆಕಾಡು ಬಳಿ ಶನಿವಾರ ನಡೆದಿದೆ.
ಬೆಂಗಳೂರು ಮೂಲದ ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅವಗಢ ಸಂಭವಿಸಿದ್ದು, ಕಿರಣ್ (23) ಮತ್ತು ಶ್ರವಣ್(25 ) ಸ್ಥಳದಲ್ಲಿಯೇ (25) ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ರಾಜು ಹಾಗೂ ಪುಟ್ಟೇಗೌಡ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಅವರನ್ನು ಬೆಂಗಳೂರಿಗೆ ರವಾನಿಸಲಾಗಿದೆ.
ಘಟನೆ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.