ರಾಜ್ಯ

ಬಿಜೆಪಿ ದುರಾಸೆಗೆ ಗೆಲುವು; ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆ ಸೋತಿದೆ: ರಾಹುಲ್ ಗಾಂಧಿ

Srinivasamurthy VN
ನವದೆಹಲಿ: ಕೊನೆಗೂ ಬಿಜೆಪಿಯ ದುರಾಸೆ ಗೆದ್ದಿದ್ದು, ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆ ಸೋತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇತ್ತ ಕರ್ನಾಟಕ ವಿಧಾನಸಭೆ ಕಲಾಪದಲ್ಲಿ ದೋಸ್ತಿ ಸರ್ಕಾರದ ಮುಖ್ಯಮತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ವಿಶ್ವಾಸಮತ ಯಾಚನೆಯಲ್ಲಿ ವಿಫಲರಾದ ಬೆನ್ನಲ್ಲೇ ಬಿಜೆಪಿ ಸರ್ಕಾರ ರಚನೆ ಬಹುತೇಕ ಖಚಿತವಾಗಿತ್ತು. ಈ ವಿಚಾರ ಸುದ್ದಿಯಾದ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಮೈತ್ರಿಸರ್ಕಾರ ಆರಂಭವಾದ ಮೊದಲ ದಿನದಿಂದಲೂ ಸರ್ಕಾರಕ್ಕೆ ಪಟ್ಟಭದ್ರ ಹಿತಾಸಕ್ತಿಗಳ ಬೆದರಿಕೆ ಇತ್ತು. ಅದಾಗ್ಯೂ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ತನ್ನ ಅಭಿವೃದ್ಧಿ ಪಥದಲ್ಲಿರುವ ಅಡಚಣೆಗಳನ್ನು ಬೆದರಿಕೆಗಳನ್ನು ಎದುರಿಸಿಕೊಂಡು ಸಾಗುತ್ತಿತ್ತು. 
ಆದರೆ ಕೊನೆಗೂ ಬಿಜೆಪಿಯ ದುರಾಸೆ ಗೆದ್ದಿದ್ದು, ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆ ಸೋಲಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇನ್ನು ನಿನ್ನೆ ನಡೆದ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಿಎಂ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆಯಲ್ಲಿ ವಿಫಲರಾಗಿದ್ದರು. ಈ ಹಿನ್ನಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಕಾಂಗ್ರೆಸ್ ನಾಯಕರೊಂದಿಗೆ ರಾಜಭವನಕ್ಕೆ ತೆರಳಿದ ಅವರು ರಾಜಿನಾಮೆ ನೀಡಿದ್ದಾರೆ.
SCROLL FOR NEXT