ಬೆಂಗಳೂರು: ಟೈರ್ ಸ್ಫೋಟಗೊಂಡು ಕೆರೆಗೆ ಬಿದ್ದ ಕಾರು, ಓರ್ವ ಮಹಿಳೆ ಸಾವು
ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಗುರುವಾರ ನಡೆದಿದೆ...
ಬೆಂಗಳೂರು: ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಗುರುವಾರ ನಡೆದಿದೆ.
35 ವರ್ಷದ ಮಮತಾ ಮೃತ ಮಹಿಳೆ. ಪತಿ ಆನಂದ್ ಜೊತೆಗೆ ಹುಲಿಮಂಗಲದಿಂದ ಜಿಗಣಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಮುಂಭಾಗದ ಚಕ್ರದ ಟೈರ್ ಸ್ಫೋಟಗೊಂಡು, ಕಾರು ಮೂರು ಪಲ್ಟಿಯಾಗಿ ಕೆರೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ. ಪತಿ ಆನಂದ್ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.