ರಾಜ್ಯ

ಯಡಿಯೂರಪ್ಪ ಪ್ರಮಾಣವಚನ ಹಿನ್ನೆಲೆ : ನಗರದಲ್ಲಿ ಬಿಗಿ ಭದ್ರತೆ

Shilpa D
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಜಂಟಿ ಆಯುಕ್ತರು. ನಾಲ್ವರು ಉಪಪೊಲೀಸ್ ಆಯುಕ್ತರು ಹಾಗೂ ಆರು ಮಂದಿ ಸಹಾಯಕ ಪೊಲೀಸ್ ಆಯುಕ್ತರನ್ನು ಭದ್ರತೆ ಉಸ್ತುವಾರಿಯಾಗಿ ನೇಮಿಸಲಾಗಿದೆ. ಒಂದು ಸಾವಿರ ಪೊಲೀಸರನ್ನು ರಾಜಭವನದ ಬಳಿ ನಿಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭ ವೀಕ್ಷಣೆಗೆ ಮೂರು ಸಾವಿರ ಮಂದಿಗೆ ಪಾಸ್ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಯಾವುದೇ ಗಣ್ಯ ನಾಯಕರು ಬಂದರೂ, ಪರಿಸ್ಥಿತಿ ಕೈಮೀರದಂತೆ ನಿಯಂತ್ರಿಸಲು ಸರ್ವ ಸಜ್ಜಾಗಿದ್ದೇವೆ ಎಂದಿದ್ದಾರೆ.  ಪ್ರಮಾಣ ವಚನ ಸಮಾರಂಭ ಹಿನ್ನೆಲೆಯಲ್ಲಿ ರಾಜಭವನಕ್ಕೆ ಟೈಟ್ ಸೆಕ್ಯೂರಿಟಿ ಏರ್ಪಡಿಸಲಾಗಿದೆ.
SCROLL FOR NEXT