ಪ್ರಕಾಶ್ ರೈ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೆವಾನಿ
ಬೆಂಗಳೂರು: 2018 ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಟ, ರಾಜಕಾರಣಿ ಪ್ರಕಾಶ್ ರೈ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೆವಾನಿ ವಿರುದ್ಧ ವಿಚಾರಣೆಗೆ ತಡೆ ನೀಡಿದೆ.
‘ತಮ್ಮ ವಿರುದ್ಧದ ಪ್ರಕರಣ ಮತ್ತು ಚಾರ್ಜ್‌ಶೀಟ್ ಪ್ರಶ್ನಿಸಿ ರೈ, ಮೇವಾನಿ ಮತ್ತು ಇನ್ನಿಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರು ವಿಚಾರಣೆಗೆ ತಡೆ ನೀಡಿದ್ದಾರೆ.
ಎಫ್‌ಐಆರ್ ಆಧರಿಸಿ ಚಿಕ್ಕಮಗಳೂರು ಪೋಲೀಸರು 2018 ರ ಡಿಸೆಂಬರ್ 20 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಅರ್ಜಿದಾರರು ವಾದಿಸಿದರು. ಎಫ್ಐಆರ್ ನಲ್ಲಿ ಉಲ್ಲೇಖಿಸಲಾದ ಯಾವುದೇ ಅಪರಾಧಗಳನ್ನು ದೂರಿನಲ್ಲಿ ಹೇಳಲಾಗಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.ಅಂತಹ ಸಂದರ್ಭಗಳಲ್ಲಿ, ವಿಚಾರಣೆಯ ಅಂತಿಮ ಫಲಿತಾಂಶವನ್ನು ತಡೆ ಹಿಡಿಯಲು ಅವಕಾಶವಿದೆ ಎಂದು ಅವತು ಹೇಳಿದರು.