ಉದ್ಯಮಿ ಸಿದ್ದಾರ್ಥ್ ನಾಪತ್ತೆ
ಮಂಗಳೂರು: ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಪಾಟೀಲ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಏಕಾಏಕಿ ಸಿದ್ದಾರ್ಥ್ ನಾಪತ್ತೆಯಾಗಿದ್ದರಿಂದ ನೇತ್ರಾವತಿ ಸೇತುವೆಯ ಬಳಿ ತೀವ್ರ ಆತಂಕ ಎದುರಾಗಿದ್ದು, ಇತ್ತ ಕಂಕನಾಡಿ ಪೊಲೀಸರು ಚಾಲಕ ಬಸವರಾಜನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆಯ ವೇಳೆ ಬಸವರಾಜ್, ಸಾಹೇಬ್ರು ಇಂಗ್ಲೀಷಿನಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ನನಗೆ ಅದು ಅರ್ಥವಾಗಲಿಲ್ಲ ಎಂದು ಹೇಳಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಾರ್ಥ್ ಅವರು ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಮೊಬೈಲ್ ನಲ್ಲಿ ಮಾತನಾಡಿಕೊಂಡು ಸೇತುವೆಯ ಮೇಲೆ ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವೇಳೆ ಸಿದ್ದಾರ್ಥ್ ಅವರು `ನೀನು ಬರಬೇಡ ಇಲ್ಲೇ ಇರು’ ಎಂದು ಹೇಳಿ ಹೋಗಿದ್ದಾಗಿ ತಿಳಿಸಿದ್ದಾಗಿ ಚಾಲಕ ಹೇಳದ್ದಾನೆ. .
ತಮ್ಮ ಡ್ರೈವರ್ ಗೆ ಬರಬೇಡ ಎಂದು ತಿಳಿಸಿ ಹೋದ ಸಿದ್ದಾರ್ಥ್ ಮತ್ತೆ ಬರದೇ ಇದ್ದಾಗ ಆತಂಕಗೊಂಡ ಬಸವರಾಜ್, ಸಿದ್ದಾರ್ಥ್ ಅವರ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.