ಅಮಿತ್ ಶಾಗೆ ರಾಜ್ಯ ಸಂಸದರಿಂದ ಮನವಿ 
ರಾಜ್ಯ

ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ನಾಪತ್ತೆ: ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ!

ಮಂಗಳೂರಿನಲ್ಲಿ ನಾಪತ್ತೆಯಾಗಿರುವ ಕಾಫಿ ಡೇ ಮಾಲೀಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ವಿಜೆ ಸಿದ್ಧಾರ್ಥ್ ಅವರ ಪತ್ತೆಗೆ ಕೇಂದ್ರ ಸರ್ಕಾರದ ನೆರವು ಕೋರಿ ಬಿಜೆಪಿ ಸಂಸದರು ಮನವಿ ಪತ್ರ ನೀಡಿದ್ದಾರೆ.

ನವದೆಹಲಿ: ಮಂಗಳೂರಿನಲ್ಲಿ ನಾಪತ್ತೆಯಾಗಿರುವ ಕಾಫಿ ಡೇ ಮಾಲೀಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ವಿಜೆ ಸಿದ್ಧಾರ್ಥ್ ಅವರ ಪತ್ತೆಗೆ ಕೇಂದ್ರ ಸರ್ಕಾರದ ನೆರವು ಕೋರಿ ಬಿಜೆಪಿ ಸಂಸದರು ಮನವಿ ಪತ್ರ ನೀಡಿದ್ದಾರೆ.
ಇಂದು ಬೆಳಗ್ಗೆ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಕರ್ನಾಟಕದ ಬಿಜೆಪಿ ಸಂಸದರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ ಮಂಗಳೂರಿನ ನೇತ್ರಾವತಿ ನದಿಯಲ್ಲಿ ಕಾಣೆಯಾಗಿರುವ ವಿಜೆ ಸಿದ್ಧಾರ್ಥ್ ಅವರ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಗಳನ್ನು ರವಾನೆ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.
ಅಂತೆಯೇ ಕೇಂದ್ರ ರಕ್ಷಣಾ ಇಲಾಖೆಗೂ ಇಂತಹುದೇ ಪತ್ರ ನೀಡಿರುವ ಸಂಸದರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಮನವಿ ಪತ್ರ ನೀಡಿರುವ ಸಂಸದರು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುವಂತೆ ಕೋರಿದ್ದಾರೆ. ಈ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಕರಡಿ ಸಂಗಣ್ಣ, ಭಗವಂತ್ ಖುಬಾ, ಬಿ ಸಿ ಗತ್ತಿಗೌಡ ಮತ್ತು ವೈ ದೇವೇಂದ್ರಪ್ಪ ಅವರು ಸಾಥ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!