ರಾಜ್ಯ

46 ಗಂಟೆಗಳ ಕಾರ್ಯಾಚರಣೆ ಬಳಿಕ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಶವ ಪತ್ತೆ!

Srinivasamurthy VN
ಮಂಗಳೂರು: ಸತತ 46 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಕೊನೆಗೂ ಕೆಫೆ ಕಾಫಿ ಡೇ ಸಂಸ್ಥೆಯ ಮಾಲೀಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ವಿಜಿ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ.
ಮಂಗಳೂರಿನ ನೇತ್ರಾವತಿ ನದಿ ತಟದಲ್ಲಿ ಮೃತದೇಹ ಸಿಕ್ಕಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ಮಾಹಿತಿ ನೀಡಿದ್ದಾರೆ. ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೂ ನೇತ್ರಾವತಿ ನದಿ ತೀರದಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗಿತ್ತು. ಇಂದು ಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ.
ಇಲ್ಲಿನ ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಆ ರಸ್ತೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶವಿದೆ. ಇಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ. ಹೊಯಿಗೆ ಬಜಾರ್ ನಲ್ಲಿದ್ದ ಮೀನುಗಾರರು ನದಿಯಲ್ಲಿ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಮೃತದೇಹವನ್ನು ಮೇಲೆತ್ತಿದಾಗ ಅದು ವಿಜಿ ಸಿದ್ಧಾರ್ಥ್ ಅವರ ಮೃತದೇಹ ಎಂದು ತಿಳಿದುಬಂದಿದೆ.
SCROLL FOR NEXT