ರಾಜ್ಯ

ಸಿದ್ದಾರ್ಥ್ ರಾಜ್ಯದ ಆಸ್ತಿ, ಐಟಿ ಇಲಾಖೆಯ ಬಗ್ಗೆ ಏನೂ ಹೇಳುವುದಿಲ್ಲ-ಡಿ ಕೆ ಶಿವಕುಮಾರ್

Sumana Upadhyaya
ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ರಾಜ್ಯದ ಆಸ್ತಿಯಾಗಿದ್ದರು. ರಾಜ್ಯದಲ್ಲಿ ಬೃಹತ್ ಉದ್ಯಮ ಸೃಷ್ಟಿಸಿ ಸಾವಿರಾರು ಜನರಿಗೆ ಅದರಲ್ಲೂ ಕನ್ನಡಿಗರಿಗೆ ಉದ್ಯಮ ನೀಡಿ, ಸರಳತೆಯಿಂದ ಎಲ್ಲರ ವಿಶ್ವಾಸ ಗಳಿಸಿದ್ದರು, ಇಂದು ಅವರು ಇಲ್ಲ ಎಂದಾಗ ಸುದ್ದಿಯನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಾರ್ಥ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉದ್ಯಮವನ್ನು ಮುನ್ನಡೆಸುತ್ತಿದ್ದರು. ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಯಶಸ್ವಿ ಉದ್ಯಮಿಯಾಗಿದ್ದರು. ಈ ಮೂಲಕ ಉತ್ತಮ ಜೀವನ ನಡೆಸುತ್ತಿದ್ದರು. ಆದರೆ ಈಗ ಅವರು ನಮ್ಮನ್ನಗಲಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಆದರೆ ಅನಿವಾರ್ಯವಾಗಿ ನಂಬಲೇಬೇಕಾಗಿದೆ. ಭಗವಂತ ಅವರ ಎಲ್ಲಾ ಸ್ನೇಹಿತರು, ಅಭಿಮಾನಿಗಳು, ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. 
ಆದಾಯ ತೆರಿಗೆ ಬಹಳ ತರಾತುರಿಯಲ್ಲಿ ಸ್ಪಷ್ಟನೆ ನೀಡಿದೆ. ಅವರು ಈಗ ಏನು ಬೇಕಾದರು ಮಾತನಾಡಬಹುದು. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ. ಈಗ ನಾನು ಇಲಾಖೆಯ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು. 
SCROLL FOR NEXT