ಶಿವಕುಮಾರ ಸ್ವಾಮೀಜಿ 
ರಾಜ್ಯ

ಡಾ. ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ ನೀಡಿ': ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ!

ತ್ರಿವಿಧ ದಾಸೋಹಿ. ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ 'ಭಾರತ ರತ್ನ ಪುರಸ್ಕಾರ' ನೀಡಬೇಕು ಎಂದು ಪ್ರಧಾನಿ ಮೋದಿಗೆ...

ಬೆಂಗಳೂರು: ತ್ರಿವಿಧ ದಾಸೋಹಿ. ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ 'ಭಾರತ ರತ್ನ ಪುರಸ್ಕಾರ' ನೀಡಬೇಕು ಎಂದು ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. 
ಕುಮಾರಸ್ವಾಮಿ ಅವರು ಪತ್ರದಲ್ಲಿ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಇನ್ನು ರಾಜ್ಯದ ಬಿಜೆಪಿ ನಾಯಕರು ಕೂಡ ಈ ಪ್ರಯತ್ನದಲ್ಲಿ ಸದನದಲ್ಲಿ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಪತ್ರದಲ್ಲಿ ಕುಮಾರಸ್ವಾಮಿ ಅವರು ಪತ್ರದಲ್ಲಿ ಐತಿಹಾಸಿಕ ಹಿನ್ನೆಲೆಯನ್ನ ಹೊಂದಿರುವ ತುಮಕೂರು ಸಿದ್ದಗಂಗಾ ಮಠ ಸುಮಾರು 600 ವರ್ಷಗಳ ಇತಿಹಾಸ ಹೊಂದಿದೆ. 1941ರಲ್ಲಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಠದ ಜವಾಬ್ದಾರಿಯನ್ನು ಸ್ವೀಕಾರ ಮಾಡಿದ್ದರು. 1908ರ ಏಪ್ರಿಲ್ 1ರಂದು ಶಿವಕುಮಾರ ಸ್ವಾಮೀಜಿಗಳು ಜನಿಸಿದ್ದು ಅವರು ಲಿಂಗೈಕ್ಯರಾಗುವವರೆಗೂ ಮಠವನ್ನು ಮುನ್ನಡೆಸಿ, ಸಾಮಾಜಿಕ ಸೇವೆಯಲ್ಲಿ ಮಾದರಿ ಎನಿಸುವ ಕಾರ್ಯ ಮಾಡಿದ್ದಾರೆ.
ಹೀಗೆ ಕುಮಾರಸ್ವಾಮಿ ಅವರು ತಮ್ಮ ಪತ್ರದಲ್ಲಿ ಸವಿವರವಾಗಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT