ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಜೂನ್ 21ರಂದು ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಸಿಎಂ ಗ್ರಾಮ ವಾಸ್ತವ್ಯ ಪುನಾರಂಭ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಮೊದಲ ಹಂತದಲ್ಲಿ ಯಾದಗಿರಿ ಮತ್ತು ಕಲಬುರಗಿಯಲ್ಲಿ...

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಮೊದಲ ಹಂತದಲ್ಲಿ ಯಾದಗಿರಿ ಮತ್ತು ಕಲಬುರಗಿಯಲ್ಲಿ ಕೈಗೊಳ್ಳಲಿದ್ದಾರೆ. 
ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. 
ಅಂತೆಯೇ ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕುಗಳಲ್ಲೂ ಗ್ರಾಮ ವಾಸ್ತವ್ಯಕ್ಕೆ ದಿನಾಂಕ ನಿಗದಿಯಾಗಿದೆ. ಈ ಮೊದಲು ಕುಮಾರ ಸ್ವಾಮಿ ಅವರು ಕೊಡಗು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕುಮಾರಸ್ವಾಮಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಸ್ತರಿಸಿದ್ದಾರೆ. 
ಮುಖ್ಯಮಂತ್ರಿಗಳು ತಾವು ಪ್ರಾರಂಭಿಸಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಕುರಿತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದರು. 
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಗ್ರಾಮ ವಾಸ್ತವ್ಯವನ್ನು ಮುಖ್ಯಮಂತ್ರಿಗಳು ಪ್ರಾರಭಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರದ ಆಡಳಿತ ಚುರುಕುಗೊಳಿಸಲು ಮತ್ತು ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ಜನಾಭಿಪ್ರಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟರು.
ತಮ್ಮ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಜೂನ್ 21 ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ನಡೆಸುವುದಾಗಿ ತಿಳಿಸಿದರು.
ಈ ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ತಾವು ವಾಸ್ತವ್ಯ ಹೂಡಲಿರುವ ಗ್ರಾಮಗಳು, ಆಸುಪಾಸಿನ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡುವಂತೆಯೂ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. 
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ. ಎಸ್. ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಈ. ವಿ. ರಮಣ ರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿ ಗಳ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ