ರಾಜ್ಯ

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸಲ್ಲದು: ಸಿದ್ದರಾಮಯ್ಯ

Sumana Upadhyaya
ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಎಂ ಬಿ ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಕನ್ನಡಮೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ ಅಸ್ಮಿತೆ, ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
SCROLL FOR NEXT