ಸಾಂದರ್ಭಿಕ ಚಿತ್ರ 
ರಾಜ್ಯ

ಕುಶಾಲನಗರ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

ಕೊಡಗು ಜಿಲ್ಲೆ ಕುಶಾಲನಗರ ಬಳಿಯ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರು ಪದವಿ ಪೂರ್ವ ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ಬಳಿಯ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರು ಪದವಿ ಪೂರ್ವ ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ಅಕಾಶ್, ಗಗನ್ ಮತ್ತು ಶಶಾಂಕ್ ಎಂದು ಗುರುತಿಸಲಾಗಿದ್ದು, ನತದೃಷ್ಟರೆಲ್ಲ ಮಡಿಕೇರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇವರೆಲ್ಲ ರಮ್ಜಾನ್‌ ಹಬ್ಬದ ರಜೆ ಹಿನ್ನೆಲೆಯಲ್ಲಿ ಕುಶಾಲನಗರದ ಸ್ನೇಹಿತನ ಮನೆಗೆ ಬಂದಿದ್ದರು. ಊಟದ ನಂತರ ಒಂಭತ್ತು ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ತೆರಳಿದೆ. ಆಕಾಶ್‌ ಮೊದಲು ನದಿಗೆ ಈಜಲು ಇಳಿದಿದ್ದು, ಆತ ಮುಳುಗುತ್ತಿರುವುದನ್ನು ಕಂಡ ಇತರ ಇಬ್ಬರು ಸ್ನೇಹಿತರು ನದಿಗೆ ಹಾರಿದ್ದಾರೆ. ಆದರೆ, ಮೂವರೂ ನೀರಿನಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ.

ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವರ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಕುಶಾಲನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!