ವಿಜಯಪುರ: ಗೋಳ ಗುಮ್ಮಟ ಹೊರ ವಿನ್ಯಾಸ ದುರಸ್ತಿಗೆ 1 ಕೋಟಿ ರು. ಕೋರಿಕೆ
ವಿಶ್ವ ಪ್ರಸಿದ್ಧ ಗೋಳಗುಮ್ಮಟ ಹೊರ ವಿನ್ಯಾಸ ಶೀಘ್ರದಲ್ಲೇ ನವೀಕರಣಗೊಳ್ಳಲಿದೆ, ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಾಚ್ಯ ...
ವಿಜಯಪುರ: ವಿಶ್ವ ಪ್ರಸಿದ್ಧ ಗೋಳಗುಮ್ಮಟ ಹೊರ ವಿನ್ಯಾಸ ಶೀಘ್ರದಲ್ಲೇ ನವೀಕರಣಗೊಳ್ಳಲಿದೆ, ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಾಚ್ಯ ಸಂಶೋಧನಾ ಇಲಾಖೆ ಅಧಿಕಾರಿಗಳು ಹಣಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
1 ಕೋಟಿ ರು ಹಣ ನೀಡುವಂತೆ ಏಪ್ರಿಲ್ ತಿಂಗಳಲ್ಲಿ ಮನವಿ ಸಲ್ಲಿಸಿದೆ, ಪ್ರಾಚ್ಯ ಸಂಶೋಧನಾ ಇಲಾಖೆಯ ತಜ್ಞರ ತಂಡ ಕೆಲ ದಿನಗಳ ಹಿಂದೆ,ಗೋಲ್ ಗುಂಬಜ್ ಗೆ ಭೇಟಿ ನೀಡಿತ್ತು. ಏನೆಲ್ಲಾ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ವರದಿ ಸಲ್ಲಿಸಿತ್ತು.
ಆ ವರದಿಯ ಆದಾರದ ಮೇಲೆ ಅದಕ್ಕೆ ತಗಲು ವೆಚ್ಚವನ್ನು ಅಂದಾಜು ಮಾಡಿ ಮೇಲಧಿಕಾರಿಗಳಿಗೆ ನೀಡಿದೆ, ಆದಷ್ಟ ಬೇಗ ಇದಕ್ಕೆ ಅನುಮೋದನೆ ಸಿಗಲಿದೆ ಎಂದು ಹಿರಿಯ ಅಧಿಕಾರಿ ಮೌನೇಶ್ ಕುರಾವತ್ತಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.