ಎಚ್ ಡಿ ಕುಮಾರಸ್ವಾಮಿ, 
ರಾಜ್ಯ

ಮಹಾರಾಷ್ಟ್ರದಿಂದ ನೀರು: ಮಧ್ಯಪ್ರವೇಶಿಸುವಂತೆ ರಾಜ್ಯಪಾಲರಿಗೆ ಸಿಎಂ ಕುಮಾರಸ್ವಾಮಿ ಮನವಿ

ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ನೀರು ಪಡೆದುಕೊಳ್ಳಲು ರಾಜ್ಯಪಾಲ ವಜುಭಾಯಿ ವಾಲಾ ಅವರು ಮಧ್ಯಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ...

ಬೆಂಗಳೂರು: ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ನೀರು ಪಡೆದುಕೊಳ್ಳಲು ರಾಜ್ಯಪಾಲ ವಜುಭಾಯಿ ವಾಲಾ ಅವರು ಮಧ್ಯಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಮಯ ಪಡೆದುಕೊಳ್ಳಲು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಸಿಎಂ ಕುಮಾರಸ್ವಾಮಿ, ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳು ಕುಡಿಯುವ ನೀರಿನ ಅಭಾವದಿಂದ ತತ್ತರಿಸಿದ್ದು, ತುರ್ತಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆಗೊಳಿಸಲು ಮಹಾರಾಷ್ಟ್ರಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಿಂದ ನೀರು ಪಡೆದುಕೊಳ್ಳಲು ರಾಜ್ಯ ಸರ್ಕಾರ ನಡೆಸಿರುವ ಪ್ರಯತ್ನಗಳನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ರಾಜ್ಯಪಾಲರ ಗಮನಕ್ಕೆ ತಂದಿದ್ದಾರೆ.
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲೆಯ ಶಾಸಕರು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿರುವ ಕಾರಣ ಮುಖ್ಯಮಂತ್ರಿಗಳು, ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!