ರಾಜ್ಯ

ಸಾಂಸ್ಕೃತಿಕ ರಾಯಬಾರಿಯನ್ನು ಕಳೆದುಕೊಂಡಿದ್ದೇವೆ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ

Nagaraja AB
ಬೆಂಗಳೂರು: ಹಿರಿಯ ಸಾಹಿತಿ, ನಟ, ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ಸಾಹಿತ್ಯ, ರಂಗಭೂಮಿ, ಸಿನಿಮಾ ಕ್ಷೇತ್ರಕ್ಕೆ ಅವರ ಕೊಡುಗೆ ಅನುಪಮವಾಗಿದ್ದು, ಯಾವಾಗಲೂ ನೆನಪಿನಲ್ಲಿ ಉಳಿಯುವಂತಾಗಿದೆ.ಅವರ ನಿಧನದಿಂದಾಗಿ ನಾವು ಸಾಂಸ್ಕೃತಿಕ ರಾಯಬಾರಿಯನ್ನು ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಟ್ವೀಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಕನ್ನಡ ಮತ್ತು ಭಾರತ ಸಾಹಿತ್ಯ ಹಾಗೂ ನಾಟಕ‌ ಲೋಕಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ‌ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ. 

ಕನ್ನಡ ಮತ್ತು ಭಾರತ ಸಾಹಿತ್ಯ ಹಾಗೂ ನಾಟಕ‌ ಲೋಕಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ‌ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. 

ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ  ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ‌ ನಾನು ಭಾಗಿಯಾಗಿದ್ದೇನೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
SCROLL FOR NEXT