ರಾಜ್ಯ

ಡಿಕೆಶಿ ಮನೆ ಮೇಲೆ ಐಟಿ ದಾಳಿ ಪ್ರಕರಣ: ಜೂನ್ 25ಕ್ಕೆ ತೀರ್ಪು

Raghavendra Adiga
ಬೆಂಗಳೂರು: ಬೆಂಗಳೂರು ಹಾಗೂ ನವದೆಹಲಿಯಲ್ಲಿ ತಮಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣದ ವಿಚಾರಣೆ ಕೈಬಿಡಬೇಕು ಎಂದು ಕೋರಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಇತರ ನಾಲ್ವರು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ತೀರ್ಪನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.
ಪ್ರಕರಣವನ್ನು ಕೈಬಿಡುವಂತೆ ಕೋರಿ ಡಿ.ಕೆ.ಶಿವಕುಮಾರ್, ಎನ್‌.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ತೀರ್ಪನ್ನು ಕಾಯ್ದಿರಿಸಿದ್ದು, ಜೂನ್ 25ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದರು.
ಬೆಂಗಳೂರಿನಿಂದ ದೆಹಲಿಗೆ ಕಾನೂನುಬಾಹಿರವಾಗಿ ಹಣ ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು 2017ರ ಆಗಸ್ಟ್‌ 2ರಂದು ಡಿ.ಕೆ.ಶಿವಕುಮಾರ್‌ಗೆ ಸೇರಿದ ಬೆಂಗಳೂರು ಮತ್ತು ನವದೆಹಲಿಯ ಮನೆಗಳ ಮೇಲೆ ದಾಳಿ ನಡೆಸಿ 8.59 ಕೋಟಿ ನಗದನ್ನು ಜಪ್ತಿ ಮಾಡಿದ್ದರು. 
SCROLL FOR NEXT