ರಾಜ್ಯ

ಮೇಕೆದಾಟು ಯೋಜನೆಗೆ ತಮಿಳುನಾಡು ಅವಕಾಶ ನೀಡುತ್ತಿಲ್ಲ: ಸಿಎಂ ಕುಮಾರಸ್ವಾಮಿ

Shilpa D
ಬೆಂಗಳೂರು: ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದ್ದಾರೆ.
ಮೇಕೆದಾಟು ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕಾಗಿ ಡಿಪಿಆರ್ ಸಲ್ಲಿಸಲಾಗಿದೆ, ಇದಕ್ಕೆ ಸುಲಭವಾಗಿ ಯೋಜನೆ  ಜಾರಿಗೆ ತರಲು ತಮಿಳುನಾಡು ಸರ್ಕಾರ ಅವಕಾಶ ನೀಡುತ್ತಿಲ್ಲ, ಆದರೆ ನಾವು ಸುಮ್ಮನೆ ಕೂರುವುದಿಲ್ಲ, ನಮ್ಮ ಪ್ರಯತ್ನ ನಾವು ಮಾಡುತ್ತಲೇ ಇರುತ್ತಿದ್ದೇವೆ ಎಂದು ಜಲ ಸಂಪನ್ಮೂಲ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಲಿಂಗನಮಕ್ಕಿ ಮತ್ತು ತುಂಗಭದ್ರಾ ಜಲಾಶಯಗಳಿಂದ ನೀರು ಪೂರೈಸಲು ಚಿಂತಿಸಲಾಗುತ್ತಿದೆ, ಬೆಂಗಳೂರು ಸೇರಿದಂತೆ ಬೇರೆ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲು ಲಿಂಗನಮಕ್ಕಿ ನೀರಾವರಿ ಯೋಜನೆಗಳನ್ನು ಆದಷ್ಚು ಶೀಘ್ರವಾಗಿ ಮಾಡಬೇಕೆಂದು ಸಿಎಂ ಸೂಚಿಸಿದ್ದಾರೆ.
ಇದಕ್ಕೂ ಮೊದಲು ಕುಮಾರಸ್ವಾಮಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಬಾಕಿ ಉಳಿದಿರುವ ಎಲ್ಲಾ ಯೋಜನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆದೇಶಿಸಿದ್ದಾರೆ.
SCROLL FOR NEXT