ಎಸ್ ಎ ಮಳಗಲಿ 
ರಾಜ್ಯ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಸ್ ಎ ಮಳಗಲಿ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಗಾಂಧಿವಾದಿ ಸೋಮಲಿಂಗಪ್ಪ ಅಪ್ಪಣ್ಣ ಮಳಗಲಿ ಅವರು ಕಳೆದ ರಾತ್ರಿ ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದು...

ಬೆಳಗಾವಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಗಾಂಧಿವಾದಿ ಸೋಮಲಿಂಗಪ್ಪ ಅಪ್ಪಣ್ಣ  ಮಳಗಲಿ ಅವರು ಕಳೆದ ರಾತ್ರಿ  ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದು, ಅವರಿಗೆ 97 ವರ್ಷ ವಯಸ್ಸಾಗಿತ್ತು.  
ಮೃತರು ಪತ್ನಿ, ಒಬ್ಬ ಮಗ ಮತ್ತು ಏಳು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಅಗಿದ್ದ ಅವರು ಹುಡಾಲಿ ಗ್ರಾಮಕ್ಕೆ ಸೇರಿದವರಾಗಿದ್ದು, ಕೆಲವು ವರ್ಷಗಳಿಂದ ಬೆಳಗಾವಿಯಲ್ಲಿ ನೆಲೆಸಿದ್ದರು. 
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರಭಾವದಿಂದ ಅವರು ತಮ್ಮ 17 ನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಚಳವಳಿಗೆ ಧುಮುಕಿ  1942 ರಲ್ಲಿ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿದ್ದರು.
ನಂತರ ಅವರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹುದಲಿ   ಗ್ರಾಮೋದ್ಯೋಗ ಸಂಘವನ್ನು ತಮ್ಮ ಹುಟ್ಟೂರು ಹುಡಾಲಿಯಲ್ಲಿ ಪ್ರಾರಂಭಿಸಿ ಅದರ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ 31 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಿಲ್ಲಾ ಆಡಳಿತ ಮತ್ತು ಹಲವಾರು ಸಂಘಟನೆಗಳ ಸನ್ಮಾನಕ್ಕೆ ಅವರು ಪಾತ್ರರಾಗಿದ್ದರು.
ರಂಗನಾಥ್ ವಡವಿ ಅವರೊಂದಿಗೆ 'ಸಚಿತ್ರ ಭಾರತ್- ಸ್ವಾತಂತ್ರ್ಯ ಸಂಗ್ರಾಮದ  ಇತಿಹಾಸ ಮತ್ತು ಗಾಂಧೀಜಿ' ಎಂಬ ಪುಸ್ತಕ ಬರೆದಿದ್ದು,  ಇದನ್ನು  ಹಿಂದಿ ಮತ್ತು ಇಂಗ್ಲಿಷ್‌ಗೆ ಅನುವಾದಿಸಲಾಗಿತ್ತು.  ಶುಕ್ರವಾರ ಹುಡಾಲಿ ಗ್ರಾಮದಲ್ಲಿ ಅವರ ಅಂತಿಮ ವಿಧಿವಿಧಾನಗಳು ಜರುಗಿದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!