ರಾಜ್ಯ

ಸಾಲ ಹಿಂತಿರುಗಿಸದ್ದಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಿಂಸೆ; 7 ಮಂದಿ ಬಂಧನ

Sumana Upadhyaya
ಬೆಂಗಳೂರು: ಅಮಾನವೀಯ ಘಟನೆಯೊಂದರಲ್ಲಿ ಪಡೆದುಕೊಂಡ ಸಾಲವನ್ನು ವಾಪಸ್ ನೀಡಲಿಲ್ಲ ಎಂದು ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಿಂಸೆ ನೀಡಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಈ ದೃಶ್ಯವನ್ನು ದಾರಿಯಲ್ಲಿ ಹೋಗುವವರು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದು ವೈರಲ್ ಆಗಿದೆ.
ವಿಡಿಯೊದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಲಾಗಿದ್ದು ಅಕ್ಕಪಕ್ಕದ ನಿವಾಸಿಗಳು ಆಕೆಯ ಸುತ್ತ ಓಡಾಡುತ್ತಾ ಮಾತನಾಡಿಕೊಳ್ಳುತ್ತಿದ್ದಾರೆ. ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
SCROLL FOR NEXT