ರಾಜ್ಯ

ಇನ್ನು 10 ದಿನಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಡುತ್ತೇವೆ: ಎಂ ಬಿ ಪಾಟೀಲ್

Sumana Upadhyaya
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೃಹ ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಘವೇಂದ್ರ ಔರಾದ್ಕರ್ ಸಮಿತಿಯ ವರದಿಯನ್ನು ಜಾರಿಗೆ ತರುವ ಕುರಿತು ಚರ್ಚಿಸಿದರು. ಔರಾದ್ಕರ್ ಸಮಿತಿ ಪೊಲೀಸ್ ಸಿಬ್ಬಂದಿಗೆ ವೇತನ ಹೆಚ್ಚಳ ಸೇರಿದಂತೆ ಹಲವು ಕ್ರಮಗಳಿಗೆ ಶಿಫಾರಸು ಮಾಡಿದೆ.
ಪೊಲೀಸ್ ಇಲಾಖೆ, ಕಾರಾಗೃಹ, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಸಿಬ್ಬಂದಿಗಳ ವೇತನದ ಬಗ್ಗೆ ಸಿಎಂ ಕುಮಾರಸ್ವಾಮಿ ವಿಸ್ತೃತ ವರದಿಯನ್ನು ಕೇಳಿದ್ದು, ಅದನ್ನು ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸದ್ಯದಲ್ಲಿಯೇ ಚರ್ಚಿಸಿ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಗೃಹ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಔರಾದ್ಕರ್ ಸಮಿತಿಯ ಎಲ್ಲಾ ವಿಷಯಗಳ ಕುರಿತು ಚರ್ಚಿಸಲಾಗಿದೆ. ಪೊಲೀಸ್ ಸಿಬ್ಬಂದಿಗೆ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡುವಂತೆ ನಾವು ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದು ಪೊಲೀಸ್ ಸಿಬ್ಬಂದಿಯ ಹುದ್ದೆ ಬಡ್ತಿ ಕುರಿತು ಸಹ ಮನವಿ ಮಾಡಿದ್ದೇವೆ ಎಂದರು.
ವೇತನ ಹೆಚ್ಚಳ ಮಾಡಿದರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 600 ಕೋಟಿಯಷ್ಟು ಹೊರೆಯಾಗುತ್ತದೆ. ಆದರೆ ಸಿಎಂ ಅವರು ಈ ಬಾರಿ ವರದಿಯಲ್ಲಿನ ಶಿಫಾರಸ್ಸನ್ನು ಪರಿಗಣಿಸಲು ನಿರ್ಧರಿಸಿದ್ದು ಹಣಕಾಸು ಇಲಾಖೆ ಸಹ ಸಕಾರಾತ್ಮಕವಾಗಿದೆ. ಇನ್ನು 10 ದಿನಗಳೊಳಗೆ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿಯನ್ನು ನೀಡಲಿದ್ದೇವೆ ಎಂದರು.
SCROLL FOR NEXT