ರಾಜ್ಯ

800 ಮರ ಕಡಿಯಲು ಅನುಮತಿ ನೀಡಿದ್ದ ಕೊಡಗು ಅರಣ್ಯ ಉಪ ಸಂರಕ್ಷಣಾಧಿಕಾರಿ ಅಮಾನತು

Lingaraj Badiger
ಮಡಿಕೇರಿ: ಕರ್ತವ್ಯಲೋಪ ಎಸಗಿದ ಆರೋಪದಡಿ ಕೊಡಗು ಅರಣ್ಯ ಉಪ ಸಂರಕ್ಷಣಾಧಿಕಾರಿ ಎಂ ಮಂಜುನಾಥ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲೆಯ ಕೆ ನಿಡುಗರಿ ಗ್ರಾಮ ಪಂಚಾಯತ್ ವ್ಯಾಪ್ತಿಯ 800 ಮರಗಳನ್ನು ಅನಧಿಕೃತವಾಗಿ ಕಡಿಯಲು ಮಂಜುನಾಥ್ ಅನುಮತಿ ನೀಡಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ, ಕೊಡಗು ಜಿಲ್ಲೆಯಲ್ಲಿ 800 ಮರಗಳನ್ನು ಕಡಿದು ಹಾಕುವ ಮಾಧ್ಯಮದ ವರದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖೇದ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
SCROLL FOR NEXT