ಹರ್ಷಿಕಾ ಪೂಣಚ್ಚ 
ರಾಜ್ಯ

ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗೆ: ಸಚಿವರ ಮಾತಿಗೆ ಹರ್ಷಿಕಾ ಪ್ರತಿಕ್ರಿಯೆ

ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗೆ: - ಇದು ಸಚಿವ ಸಾ.ರಾ. ಮಹೇಶ್ ಹೇಳಿಕೆಗೆ ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯೆ.

ಬೆಂಗಳೂರು: ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗೆ: - ಇದು ಸಚಿವ ಸಾ.ರಾ. ಮಹೇಶ್ ಹೇಳಿಕೆಗೆ ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯೆ. 
ಮಡಿಕೇರಿಯಲ್ಲಿ ನೆರೆ ಸಂತ್ರಸ್ಥರಿಗೆ ಸರ್ಕಾರ ನಿರ್ಮಿಸಿಕೊಟ್ಟಿರುವ ಮನೆಗಳು ಸರಿಯಾಗಿಲ್ಲ ಎಂಬ ಟೀಕೆಗೆ  ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಯಿಸಿರುವ ನಟಿ ಹರ್ಷಿಕಾ ಸಚಿವರಿಗೆ ಟಾಂಗ್  ಕೊಟ್ಟಿದ್ದಾರೆ.
"ಇದ್ದದ್ದನ್ನ ಇದ್ದಂತೆ ಹೇಳೀದರೆ ಎದ್ದು ಬಂದು ಎದೆಗೆ ಒದ್ದಂತೆ, ನಾನು ಇಂಜಿನಿಯರಿಂಗ್ ಪದವಿಧರೆ. ನಾನು ಯಾರನ್ನು ದೋಷಿಸಿಲ್ಲ. ಭಾರತೀಯಳಾಗಿ ನನಗೆ ಪ್ರಶ್ನೆ ಕೇಳುವ ಹಕ್ಕಿದೆ.ಚಿತ್ರರಂಗದವರೆಂದರೆ ಕೇವಲ ಸಿನಿಮಾಗಳಲ್ಲಿ ನಟಿಸುವುದಷ್ಟೇ ಅಲ್ಲ. ಬೇರೇನೂ ಮಾತನಾಡುವುದು ತಪ್ಪೆ?
"ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳಲ್ಲಿ ಗಾಳಿ, ಬೆಳಕು ವ್ಯವಸ್ಥೆ ಸರಿಯಿರಲಿಲ್ಲ. ಶೀಟ್ ಮನೆಎಂಬಂತಿತ್ತು. ಅದಕ್ಕೆ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಮನೆಗಳನ್ನು ಕಟ್ಟಿಕೊಡಲಿ ಎಂದು ನಾನು ಈ ಮಾತು ಹೇಳಿದ್ದೆ. ನಾನು ಯಾರನ್ನೂ ದೂರಿಲ್ಲ.
ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನವಳು. ಅಲ್ಲದೆ ಸಿನಿಮಾದವರ ಬಗೆಗೆ ಹಗುರಾಗಿ ಮಾತನಾಡಬೇಡಿ, ಸಿನಿಮಾದವರು ಏನನ್ನು ಮಾಡಬಹುದು ಎಂಬುದನ್ನು ನಾನು ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಂಡಿದ್ದೇನೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ , ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು ಹಾಗಾಗಿ ಸಿನಿಮಾ ಬಗ್ಗೆ ಕೀಳು ಭಾವನೆ ಬೇಡ" ನಟಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ