ರಾಜ್ಯ

ವೈದ್ಯರು ಮುಷ್ಕರ ನಿಲ್ಲಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಿ, ಸಿಎಂ ಕುಮಾರಸ್ವಾಮಿ

Sumana Upadhyaya
ಬೆಂಗಳೂರು:ವೈದ್ಯರ ಮೇಲೆ ಹಲ್ಲೆ ಖಂಡನೀಯ. ಆದರೆ ಆದರೆ, ವೈದರು ಮುಷ್ಕರ ನಿರತರಾದರೆ ಸಹಸ್ರಾರು ರೋಗಿಗಳಿಗೆ ತೊಂದರೆಯಾಗುತ್ತದೆ. ಕೂಡಲೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮುಷ್ಕರ ನಿರತ ವೈದ್ಯರಿಗೆ ಮನವಿ ಮಾಡಿದ್ದಾರೆ.
ವೈದರು ಮುಷ್ಕರ ನಿರತರಾದರೆ ಸಹಸ್ರಾರು ರೋಗಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗಿದೆ. ಮುಷ್ಕರವನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯೇ ಸುತ್ತೋಲೆ ಹೊರಡಿಸಿದೆ. ಕೂಡಲೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಾಕೀತು ಮಾಡಿದ್ದಾರೆ.
ಓರ್ವ ವೃದ್ಧ ರೋಗಿಯ ಕುಟುಂಬವು ಪಶ್ಚಿಮ ಬಂಗಾಳದ ಇಬ್ಬರು ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದ ಬಳಿಕ ಸೋಮವಾರದಿಂದ ವೈದ್ಯರ ಮುಷ್ಕರ ಪ್ರಾರಂಭವಾಗಿದ್ದು ಇದು ಕೇವಲ ಆ ರಾಜ್ಯಕ್ಕಷ್ಟೇ ಸೀಮಿತವಾಗದೆ ದೇಶಾದ್ಯಂತ ಹಬ್ಬಿದೆ.
SCROLL FOR NEXT