ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ; 19 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ...
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ 19 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಈ ಮೊದಲು ಐಜಿಪಿ ಆಗಿದ್ದ ಅಲೋಕ್ಗೆ ಎಡಿಜಿಪಿಯಾಗಿ ಬಡ್ತಿ ನೀಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ನೇಮಕ ಮಾಡಲಾಗಿದೆ. ಟಿ. ಸುನಿಲ್ ಕುಮಾರ್ ಅವರನ್ನು ನೇಮಾಕಾತಿ ವಿಭಾಗ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅಮ್ರಿತ್ ಪೌಲ್ ಪೂರ್ವ ವಿಭಾಗ ಐಜಿಪಿ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಉಮೇಶ್ ಕುಮಾರ್, ಗೃಹ ಇಲಾಖೆಯ ಕಾರ್ಯದರ್ಶಿ (PCAS) ಬಿ. ಕೆ. ಸಿಂಗ್ , ಬೆಂಗಳೂರು ಆಂತರಿಕ ಭದ್ರತೆಯ ಐಜಿಪಿಯಾಗಿ ಸೌಮೆಂದು ಮುಖರ್ಜಿ, ದಕ್ಷಿಣ ವಲಯ ಐಜಿಪಿ ಆಗಿ ರಾಘವೇಂದ್ರ ಸುಹಾಸ್, ಸಿಸಿಬಿ ಮುಖ್ಯಸ್ಥರಾಗಿ ರವಿಕಾಂತೇ ಗೌಡ ವರ್ಗಾವಣೆಗೊಂಡಿದ್ದಾರೆ.
ನಾಗರಿಕ ರಕ್ಷಣೆ ಮತ್ತು ಗೃಹ ರಕ್ಷಕ ದಳ ವಿಭಾಗದ ಎಸ್ಪಿ ಆಗಿ ಅಮಿತ್ ಸಿಂಗ್, ಎಸಿಬಿ ಎಎಸ್ಪಿ ಆಗಿ ರಾಮ್ ನಿವಾಸ್, ರೈಲ್ವೆ ಎಸ್ಪಿ ಆಗಿ ಎಂ.ಎನ್. ಅನುಚೇತ್, ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ ಬಿ ರಮೇಶ್, ಸಿಐಡಿ ಎಸ್ಪಿ ಆಗಿ ರವಿ ಡಿ ಚನ್ನಣ್ಣನವರ್, ಬೆಂಗಳೂರು ಈಶಾನ್ಯ ವಿಭಾಗ ಡಿಸಿಪಿ ಆಗಿ ಡಾ. ಭೀಮಾಶಂಕರ್ ಎಸ್ ಗುಳೇದ್, ಮೈಸೂರು ಎಸ್ಪಿ ಆಗಿ ಸಿ.ಬಿ. ರಿಶ್ಯಂತ್ ವರ್ಗಾವಣೆ ಗೊಂಡಿದ್ದಾರೆ.
ಮಾಹಮದ್ ಸುಜೀತಾ ಕೋಲಾರ ಎಸ್ಪಿ ಆಗಿ, ಟಿಪಿ ಶಿವಕುಮಾರ್ ಬೆಂಗಳೂರು ಗ್ರಾಮಾಂತರ ಎಸ್ಪಿ ಆಗಿ, ಎನ್ ವಿಷ್ಣುವರ್ಧನ ಬೆಂಗಳೂರು ಅಡಳಿತ ಡಿಸಿಪಿ ಆಗಿ, ಕಲಾಕೃಷ್ಣ ಸ್ವಾಮಿ ಎಫ್ಎಸ್ ಎಲ್ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.