ರಾಜ್ಯ

ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್‌ಗೆ ಇಡಿ ನೋಟಿಸ್

Lingaraj Badiger
ಬೆಂಗಳೂರು: ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಹಾಗೂ ಇತರೆ ಏಳು ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ಖಾನ್ ಹಾಗೂ ಏಳು ಜನರ ವಿರುದ್ಧ ದೂರು ದಾಖಲಿಸಿದ್ದ ಇಡಿ, ಇದೀಗ ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನೋಟಿಸ್ ನೀಡಿದೆ.
ಫೆಮಾ ಕಾಯಿದೆ ಉಲ್ಲಂಘಿಸಿ ವಿದೇಶಿ ಹೂಡಿಕೆ, ವಿದೇಶಿ ವಿನಿಮಯ, ವಿದೇಶಿ ವಹಿವಾಟು ನಡೆಸಿದ ಆರೋಪದ ಮೇರೆಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮನ್ಸೂರ್ ಖಾನ್ ಹಾಗೂ ಇತರರ ವಿರುದ್ಧ ದೂರು ದಾಖಲಿಸಿದ್ದ ಇಡಿ ಅಧಿಕಾರಿಗಳು ನಿನ್ನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಕೆಲವು ಮಾಹಿತಿ ಸಂಗ್ರಹಿಸಿದ ನಂತರ ಪ್ರಕರಣದ ಎಲ್ಲಾ ಆರೋಪಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಸಾವಿರಾರು ಹೂಡಿಕೆದಾರರಿಗೆ ಹಣ ಹಿಂದುರಿಗಿಸದೆ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ತನಿಖಾ ತಂಡ ತನಿಖೆಯನ್ನು ತೀವ್ರಗೊಳಿಸಿದ್ದು, ನಿನ್ನೆ ಖಾನ್‌ನ ಮೂರನೇ ಪತ್ನಿಯ ಮನೆ ಮೇಲೆ ದಾಳಿ ನಡೆಸಿ, ಚಿನ್ನಾಭರಣ ವಶಪಡಿಸಿಕೊಂಡಿತ್ತು. 40,600 ಮಂದಿ ಐಎಂಎಯಲ್ಲಿ ಹೂಡಿಕೆ ಮಾಡಿರುವುದಾಗಿ ದೂರು ನೀಡಿದ್ದಾರೆ.
SCROLL FOR NEXT