ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ಕೇಂದ್ರ ಗೃಹ ಸಚಿವಾಲಯ ತನಿಖೆಗೆ ಆದೇಶ

Srinivas Rao BV
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ವ್ಯವಸ್ಥೆಯ ಕುರಿತು ಕೇಂದ್ರ ಗೃಹ ಸಚಿವಾಲಯ ತನಿಖೆಗೆ ಆದೇಶಿಸಿದೆ. 
ಕಳೆದ ಸೋಮವಾರ ನಾಲ್ವರು ಮಹಿಳೆಯರು ಸೇರಿದಂತೆ ಎರಡು ತಂಡಗಳ ಏಳು ಪ್ರಯಾಣಿಕರಿಗೆ ಸುರಕ್ಷತಾ ತಪಾಸಣೆ ನಡೆಸದೆಯೇ ನಿಲ್ದಾಣ ಪ್ರವೇಶಿಸಲು ಅನುಮತಿ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವಾಲಯ ತನಿಖೆಗೆ ಆದೇಶಿಸಿದೆ. 
ಈ ಪ್ರಯಾಣಿಕರು ಯಾವುದೇ ಸುರಕ್ಷತಾ ತಪಾಸಣೆಗೊಳಪಡದೆ ಪುಣೆಯ ವಿಮಾನವನ್ನೇರಿದ್ದರು. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ ಎಫ್) ಹಿರಿಯ ಅಧಿಕಾರಿಗಳು ಅದನ್ನು ಪರಿಶೀಲಿಸಿದಾಗ ಈ ಪ್ರಮಾದ ಬೆಳಕಿಗೆ ಬಂದಿದೆ. 
ಈ ಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸಚಿವಾಲಯ ಸೂಚಿಸಿದೆ.
SCROLL FOR NEXT