ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಬ್ ನ 3ನೇ ಮಹಡಿಯಿಂದ ಬಿದ್ದು ಜೋಡಿ ಸಾವು; ಮಾಲೀಕ, ಮ್ಯಾನೇಜರ್ ವಿರುದ್ಧ ದೂರು ದಾಖಲು!

ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು: ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪವನ್ ಅತ್ತಾವರ್ ಹಾಗೂ ವೇದಾ ಆರ್ ಮೃತ ಜೋಡಿ. ಶುಕ್ರವಾರ ರಾತ್ರಿ ಸುಮಾರು 11:30ಕ್ಕೆ ಪವನ್ ಅತ್ತಾವರ್ ಹಾಗೂ ವೇದಾ ಆರ್ ಎಂಬವರು ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿರುವ ಆಶ್ ಬೀರ್ ಪಬ್ ಗೆ ಬಂದಿದ್ದರು. ಪಬ್ ನ ಕೊನೆಯ ರೂಫ್ ಫ್ಲೋರ್‌ನಲ್ಲಿ ಕುಳಿತು ಪಾರ್ಟಿ ಮಾಡಿದ್ದ ಪವನ್ ಹಾಗೂ ವೇದಾ ರೂಫಿನ ತುದಿಯಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಮೂರನೇ ಮಹಡಿಯಿಂದ ನೆಲಕ್ಕೆ ಬಿದ್ದಿದ್ದಾರೆ. ಇಬ್ಬರು ಪರಸ್ಪರ ಕೈ ಹಿಡಿದುಕೊಂಡೇ ಕೆಳಗೆ ಬಿದ್ದಿದ್ದಾರೆ.
ಘಟನೆಯಲ್ಲಿ ಪವನ್ ಹಾಗೂ ವೇದಾ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಇದೇ ವೇಳೆ ನೂತನ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರು ಚರ್ಚ್ ಸ್ಟ್ರೀಟ್ ರೋಡಲ್ಲಿ ನೈಟ್ ರೌಂಡ್ಸ್ ನಲ್ಲಿದ್ದರು. ಇದೇ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 
ಕೂಡಲೇ ಸ್ಥಳಕ್ಕೆ ಹೋಗಿ ನೋಡಿದಾಗ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿತ್ತು. ಇಬ್ಬರನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಅಷ್ಟರಲ್ಲಿ ಮೃತಪಟ್ಟಿದ್ದರು. ಪವನ್ ಅತ್ತಾವರ್ ರಾಷ್ಟ್ರೀಯ ಪತ್ರಿಕೆಯಲ್ಲಿ ಹಾಗೂ ವೇದಾ ಆರ್ ಐಬಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 
ಈ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಬ್ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿದೆ, ಅಗತ್ಯವಾದ ಸುರಕ್ಷತಾ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು': ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta