ರೆಹಮಾನ್ ಖಾನ್ 
ರಾಜ್ಯ

ಮನ್ಸೂರ್ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರೆಹಮಾನ್ ಖಾನ್ ಸ್ಪಷ್ಟನೆ

ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಮಾಲೀಕ ಮನ್ಸೂರ್ ಖಾನ್‍ಗೂ ತಮಗೂ ...

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಮಾಲೀಕ ಮನ್ಸೂರ್ ಖಾನ್‍ಗೂ ತಮಗೂ ಯಾವುದೇ ಸಂಬಂಧವಿಲ್ಲ. ಆತನ ಕಂಪನಿಯ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದೆ ಎಂದು ರಾಜ್ಯಸಭೆಯ ಮಾಜಿ ಸದಸ್ಯ ರಹ್ಮಾನ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಮನ್ಸೂರ್ ಖಾನ್ ನಿನ್ನೆ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಅದರಲ್ಲಿ ರೆಹಮಾನ್ ಖಾನ್ ಅವರ ಹೆಸರು ಪ್ರಸ್ತಾಪಿಸಿದ್ದ. ಈ ಹಿನ್ನೆಲೆಯಲ್ಲಿ ಇಂದು ರೆಹಮಾನ್ ಖಾನ್ ಸುದ್ದಿಗೋಷ್ಠಿ ನಡೆಸಿ ಈ ಸ್ಪಷ್ಟನೆ ನೀಡಿದ್ದಾರೆ.
ನನ್ನನ್ನು ಭೇಟಿ ಮಾಡಲು ಮನ್ಸೂರ್ ಖಾನ್‍ನನ್ನು ಶಾಸಕ ರೋಷನ್ ಬೇಗ್ ಒಮ್ಮೆ ಕರೆತಂದಿದ್ದರು. ಅದನ್ನು ಹೊರತುಪಡಿಸಿ ನಾನು ಅವರನ್ನು ಭೇಟಿ ಮಾಡಿಲ್ಲ. ಐಎಂಎ ಮುಚ್ಚಿ ಹೋಗಿರುವುದರಿಂದ ರೆಹಮಾನ್ ಖಾನ್ ಅವರಿಗೆ ಸಂತೋಷವಾಗಿರಬಹುದು, ಅವರಿಗೆ ಧನ್ಯವಾದಗಳು ಎಂದು ವಿಡಿಯೋದಲ್ಲಿ ಮನ್ಸೂರ್ ಹೇಳಿದ್ದಾನೆ. ನಾವು ಆತನ ಕಂಪೆನಿಗೆ ಸಹಕಾರ ಮಾಡಿಲ್ಲ ಎಂಬುದನ್ನು ಆತ ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾನೆ ಎಂದು ರೆಹಮಾನ್ ಖಾನ್ ಹೇಳಿದರು.
ಐಎಂಎ ವ್ಯವಹಾರಗಳ ಬಗ್ಗೆ ಮೊದಲಿನಿಂದಲೂ ತಮಗೆ ವಿರೋಧವಿತ್ತು. ತಾನೊಬ್ಬ ಚಾರ್ಟಡ್ ಅಕೌಂಟೆಂಟ್ ಆಗಿರುವುದರಿಂದ ಐಎಂಎ ವ್ಯವಹಾರಗಳ ಬಗ್ಗೆ ತಮಗೆ ಸಂಶಯವಿತ್ತು. ಆತ ಯಾವ ರೀತಿ ವ್ಯವಹಾರ ನಡೆಸುತ್ತಿದ್ದಾನೆ ಎಂಬುದು ನಮಗೆ ಮಾಹಿತಿ ಇರಲಿಲ್ಲ. ಇದೊಂದು ವಂಚಕ ಕಂಪನಿ ಎಂಬುದು 2017ರಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿದಿತ್ತು. ಆದರೆ ಸರ್ಕಾರ ಕ್ರಮ ಕೈಗೊಳ್ಳದೆ ವಿಳಂಬ ಮಾಡಿತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!