ರಾಜ್ಯ

ಲಂಚ ಪ್ರಕರಣ: ಪುತ್ತೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಜಾಮೀನು ಅರ್ಜಿ ವಜಾ

Lingaraj Badiger
ಮಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.
ಪುತ್ತೂರಿನ ಪೈ ಕೇಟರರ್ಸ್ ನ ದಿನೇಶ್ ಪೈ ಅವರಿಂದ 1.25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಎಸ್ಪಿ ಉಮಾ ಪ್ರಶಾಂತ್ ಮತ್ತು ಇನ್ ಪೆಕ್ಟರ್ ಯೋಗೀಶ್ ಕುಮಾರ್ ತಂಡ ದಾಳಿ ನಡೆಸಿ ತಹಶೀಲ್ದಾರ್ ಪ್ರದೀಪ್ ಕುಮಾರ್ ಅವರನ್ನು ಬಂಧಿಸಿತ್ತು.
ಪರ್ಲಡ್ಕದ ಪೈ ಕೆಟರರ್ಸ್ ಮಾಲೀಕ ದಿನೇಶ್ ಪೈ ಅವರಿಂದ ಲಂಚ ಪಡೆದ ಆರೋಪದಡಿ ಜೂನ್ 20ರಂದು ಬಂಧನಕ್ಕೊಳಗಾಗಿದ್ದ ಪ್ರದೀಪ್ ಕುಮಾರ್ ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮಂಗಳೂರಿನ ಕಾರಾಗೃಹದಲ್ಲಿರುವ ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಮುರಳೀಧರ ಪೈ ವಜಾಗೊಳಿಸಿದ್ದಾರೆ.
SCROLL FOR NEXT