ಪ್ರಮೋದಾದೇವಿ 
ರಾಜ್ಯ

ಜಯಚಾಮರಾಜೇಂದ್ರ ಒಡೆಯರ್‌ ಜನ್ಮಶತಮಾನೋತ್ಸವ ಕಾರ್ಯಕ್ರಮ: ಜು. 18ರಂದು ಚಾಲನೆ

ಮೈಸೂರು ರಾಜಮನೆತನದ 25ನೇ ಹಾಗೂ ಕೊನೆಯ ರಾಜ ಜಯಚಾಮರಾಜೇಂದ್ರ ಒಡೆಯರ್‌ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ.....

ಮೈಸೂರು: ಮೈಸೂರು ರಾಜಮನೆತನದ 25ನೇ ಹಾಗೂ ಕೊನೆಯ ರಾಜ ಜಯಚಾಮರಾಜೇಂದ್ರ ಒಡೆಯರ್‌ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಮೈಸೂರು ರಾಜವಂಶಸ್ಥರು ನಿರ್ಧರಿಸಿದ್ದು, ಸಕಲ ಸಿದ್ಧತೆ ನಡೆಸಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ಜುಲೈ 18ರಂದ ಜಯಚಾಮರಾಜೇಂದ್ರ ಒಡೆಯರ್‌ ಜನ್ಮಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗವುದು ಎಂದರು.
ಜುಲೈ 18ರಂದು ರಾಜ್ಯಪಾಲ ವಜುಭಾಯ್ ವಾಲಾ ಅವರು ಅರಮನೆಯ ದರ್ಬಾರ್ ಹಾಲ್ ಜನ್ಮಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಂಗಳೂರಿನಲ್ಲಿ ಜುಲೈ 20ರಂದು ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಮೋದಾದೇವಿ ತಿಳಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಮೋದಾದೇವಿ ಅವರು, ದೊಡ್ಡಕೆರೆ ಪಕ್ಕದ ಜಾಗದ ಖಾತೆ ಮಾಡಿಸಲು ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೋರ್ಟ್ ಆದೇಶ ನಮ್ಮ‌ ಪರವಾಗಿದ್ದರೂ ಅದನ್ನು ಸರ್ಕಾರ ಉಲ್ಲಂಘನೆ ಮಾಡುತ್ತಿದೆ ಎಂದರು. 
ಹಳಬರು ಒಂದು ರೀತಿ ತೊಂದರೆ ಕೊಟ್ಟರೆ, ಹೊಸಬರಿಂದ ಮತ್ತೊಂದು ರೀತಿ ತೊಂದರೆ ಆಗುತ್ತಿದೆ. ನನಗೆ ರಾಜಕೀಯ ಗೊತ್ತು. ಆದರೆ ರಾಜಕಾರಣ ‌ಮಾಡಲು ಬರಲ್ಲ. ಅದಕ್ಕಾಗಿ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!