ಕೆಂಪೇಗೌಡ ಜಯಂತಿ ಕಾರ್ಯಕ್ರಮ 
ರಾಜ್ಯ

ಕೆಂಪೇಗೌಡರಿಗೂ ನನಗೂ ವಿಶೇಷ ಬಾಂಧವ್ಯವಿದೆ: ಸಚಿವ ಡಿ.ಕೆ ಶಿವಕುಮಾರ್

ನಾಡಪ್ರಭು ಕೆಂಪೇಗೌಡರಿಗೂ ಮತ್ತು ನನಗೂ ವಿಶೇಷ ಬಾಂಧವ್ಯವಿದೆ, ಇತಿಹಾಸ ಮತ್ತು ಸಂಬಂಧವಿದೆ, ಆದರೆ ಅದನ್ನು ಇಲ್ಲಿ ಹಂಚಿಕೊಳ್ಳಲು ಬಯಸುವುದಿಲ್ಲ ...

ಬೆಂಗಳೂರು: ನಾಡಪ್ರಭು ಕೆಂಪೇಗೌಡರಿಗೂ ಮತ್ತು ನನಗೂ ವಿಶೇಷ ಬಾಂಧವ್ಯವಿದೆ, ಇತಿಹಾಸ ಮತ್ತು ಸಂಬಂಧವಿದೆ, ಆದರೆ ಅದನ್ನು ಇಲ್ಲಿ ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿವಕುಮಾರ್ ಮಾತನಾಡಿದರು. 
ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಲ್ಲಿರುವ ಕಾರಣ ಶಿವಕುಮಾರ್ ಮತ್ತು ಡಿಸಿಎಂ ಪರಮೇಶ್ವರ್ ಕಾರ್ಯಕ್ರಾಮದಲ್ಲಿ ಭಾಗವಹಿಸಿದ್ದರು
ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ''ಕೆಂಪೇಗೌಡ ಯಾವುದೇ ಸಮುದಾಯದ ಸ್ವತ್ತಲ್ಲ ಕನಕ, ವಾಲ್ಮೀಕಿ, ಬಸವಣ್ಣ, ಕೆಂಪೇಗೌಡರನ್ನು ಆಯಾ ಜಾತಿಗೆ ಸೀಮಿತವಾಗಿಡುವ ಕೆಲಸ ನಿಲ್ಲಬೇಕು ಎಂದು ಅಭಿಪ್ರಾಯಪಟ್ಟರು. 
ತುಮಕೂಕು ಸ್ಪಟಿಕಪುರ ಸಂಸ್ಥಾನದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಭಾಗವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT