ರಾಜ್ಯ

ಗ್ರಾಮ ವಾಸ್ಯವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಹೆಚ್.ಡಿ. ಕುಮಾರಸ್ವಾಮಿ

Sumana Upadhyaya
ಬೀದರ್‌: ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ಮುಖ್ಯಮಂತ್ರಿ ಎ ಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೀದರ್ ಜಿಲ್ಲೆಯ ಉಜಳಂಬದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಅವರು ಬದಲಾವಣೆ ಆಗುವುದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂಡಿದ್ದೇನೆ ಎಂದು ಹೇಳಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ, ಜನತಾದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ, ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ, ಈ ಗ್ರಾಮವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.
ಯಾದಗಿರಿ, ರಾಯಚೂರ ಹಾಗೂ ಬೀದರ ಜಿಲ್ಲೆಗಳಲ್ಲಿ ಮಾಡಿದ ಗ್ರಾಮವಾಸ್ತವ್ಯದಲ್ಲಿ ಬಂದ ಮನವಿಗಳ ಪೈಕಿ ಆಯಾ ಪ್ರದೇಶಗಳ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳು ಕೆಲವು ಇವೆ, ಸಾವಿರಾರು ಜನರು ಕುಟುಂಬದಲ್ಲಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ, ಈ ಬಗ್ಗೆ ನಾವು ಗಮನ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು.
SCROLL FOR NEXT