ಪ್ರೀತಿಗೆ ಒಲ್ಲೆ ಎಂದ ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ 
ರಾಜ್ಯ

ಮಂಗಳೂರು: ಪ್ರೀತಿಗೆ ಒಲ್ಲೆ ಎಂದ ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ

ಪ್ರೀತಿಗೆ ಒಲ್ಲೆ ಎಂದ ವಿದ್ಯಾರ್ಥಿನಿಗೆ ಹಲವು ಬಾರಿ ಚಾಕುವಿನಿಂದ ಇರಿದ ಯುವಕನೊಬ್ಬ ಕಡೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಲಾಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು: ಪ್ರೀತಿಗೆ ಒಲ್ಲೆ ಎಂದ ವಿದ್ಯಾರ್ಥಿನಿಗೆ ಹಲವು ಬಾರಿ ಚಾಕುವಿನಿಂದ ಇರಿದ ಯುವಕನೊಬ್ಬ ಕಡೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಲಾಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉಳ್ಳಾಲ ಸಮೀಪದ ಬಗಲಂಬಿ ಬಳಿ ಯುವಕ ಸುಶಾಂತ್ (22) ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ  ದೀಕ್ಷಾ (22)  ಎಂಬಾಕೆಗೆ ಇರಿದು ಕೊಲ್ಲಲು ಯತ್ನಿಸಿ ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಕೃತ್ಯದ ವೀಡಿಯೋ ಸಾಮಾಜಿಕ ತಾಣದಲ್ಲಿ ಹರಿದಾಡಿದ್ದು ದೀಕ್ಷಾ ತನ್ನ ಕಾಲೇಜಿನಿಂದ ಹಿಂದಿರುಗುತ್ತಿದ್ದಾಗ ಆರೋಪಿಯು ಬೈಕ್‌ನಲ್ಲಿ ಬಂದು ಅವಳ ಮೇಲೆ ಹಲ್ಲೆ ನಡೆಸಿದ.
ಸಂತ್ರಸ್ಥ ಯುವತಿಗೆ ಕಾಲು, ಎದೆ ಮತ್ತು ಹೊಟ್ಟೆಗೆ ತೀವ್ರ ಗಾಯಗಳಾಗಿವೆ.  ಆಕೆ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾಳೆ. ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಆಕೆಯನ್ನು ಪಾರು ಮಾಡಲು ಮುಂದಾದಾಗ ಆರೋಪಿ ತಾನೂ ಸಹ ಕುತ್ತಿಗೆಗೆ ಹಲವು ಬಾರಿ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. 
ಸ್ಥಳೀಯರು ಇಬ್ಬರನ್ನೂ ಕೂಡಲೇ ದೇರಳಕಟ್ಟೆಯ  ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸಂಸ್ತ್ರಸ್ಥ ಯುವತಿಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿದೆ.
ಎಸಿಪಿ ರಾಮರಾವ್,, ಉಳ್ಳಾಲ ನ್ಸ್‌ಪೆಕ್ಟರ್ ಗೋಪಿಕೃಷ್ಣ ಮತ್ತು ಕೊಣಾಜೆ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಪ್ರಾಥಮಿಕ ತನಿಖೆಯಿಂದ ಇದೊಂದು ಏಕಮುಖ ಪ್ರೀತಿಯ  ಪ್ರಕರಣವೆಂದು ತೋರುತ್ತದೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದಕ್ಕೂ ಮೊದಲು, ಏಪ್ರಿಲ್ 24, 2019 ರಂದು ದೀಕ್ಷಾ ಬಳಿ ಕೆಟ್ಟದಾಗಿ ವರ್ತಿಸಿದ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದ ಸುಶಾಂತ್ ವಿರುದ್ಧ ಕಾರ್ಕಳ  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸುಶಾಂತ್ ಒಂದು ಡ್ಯಾನ್ಸ್ ಕ್ಲಾನ್ ನಲ್ಲಿ ಡ್ಯಾನ್ಸ್ ಮಾಶ್ಟರ್ ಆಗಿ ಕೆಲಸ ಮಾಡುತ್ತಿದ್ದು ಅಲ್ಲಿಗೆ ನೃತ್ಯಾಭ್ಯಾಸಕ್ಕಾಗಿ ದೀಕ್ಷಾ ಆಗಮಿಸಿದ್ದಾಗ ಸುಶಾಂತ್ ತನ್ನನ್ನು ಪ್ರೀತಿಸಿಎಂದು ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video