ರಾಜ್ಯ

ವಿಧಾನ ಸೌಧದ ಸಿಬ್ಬಂದಿಗೆ ಸ್ಮಾರ್ಟ್ ಕಾರ್ಡ್ ಗುರುತಿನ ಚೀಟಿ

Sumana Upadhyaya
ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಾಳೆಯಿಂದ ಹೊಸ ಗುರುತಿನ ಚೀಟಿ ಧರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
ಈ ಸಂಬಂಧ ಡಿಪಿಎಆರ್ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಚಿವಾಲಯದ ಸಿಬ್ಬಂದಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ ಪ್ರವೇಶಿಸುವ ಸಂದರ್ಭ ಹಾಗೂ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಸ್ಮಾರ್ಟ್​ಕಾರ್ಡ್ ಧರಿಸುವುದು ಕಡ್ಡಾಯವೆಂದು ಸೂಚಿಸಲಾಗಿದೆ. ಟ್ಯಾಗ್ ಹೊಂದಿರುವ ಸ್ಮಾರ್ಟ್ ಕಾರ್ಡ್​ಗಳನ್ನು ಕಡ್ಡಾಯವಾಗಿ ಬಳಸುವಂತೆಯೂ ನಿರ್ದೇಶಿಸಲಾಗಿದೆ.
SCROLL FOR NEXT