ನಗರ ವಸತಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ನಗರ ವಸತಿ ಯೋಜನೆಯಡಿ 40 ಸಾವಿರ ಅರ್ಜಿಗಳು; ಮುಖ್ಯಮಂತ್ರಿ ಕುಮಾರಸ್ವಾಮಿ

ನಗರದಲ್ಲಿ ಬಡ ಜನತೆಗೆ ಒಂದು ಲಕ್ಷ ಮನೆ ನಿರ್ಮಿಸುವ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರ 40 ಸಾವಿರಕ್ಕೂ ...

ಬೆಂಗಳೂರು; ನಗರದಲ್ಲಿ ಬಡ ಜನತೆಗೆ ಒಂದು ಲಕ್ಷ ಮನೆ ನಿರ್ಮಿಸುವ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರ 40 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಸರ್ಕಾರದ ನಗರ ವಸತಿ ಯೋಜನೆಯ ಸುಮಾರು 10 ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಿ ಅವರು ಮಾತನಾಡಿದರು. ನಗರ ಗೃಹ ಯೋಜನೆಯಡಿ ಬಡವರಿಗೆ ಸೂರು ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಒಟ್ಟು 1,600 ಎಕರೆ ಜಮೀನನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಗೆ ವರ್ಗಾಯಿಸಲಾಗಿದೆ. ಸರ್ಕಾರ ಭೂಮಿ ಮತ್ತು ಸುಮಾರು 3 ಲಕ್ಷ ಮನೆಗಳನ್ನು ನಿರ್ಮಿಸುವುದಲ್ಲದೆ 4 ಲಕ್ಷದವರೆಗೆ ಸಾಲ ನೀಡಲು ಖಾತ್ರಿದಾರನಾಗಿ ಸಹಿ ಹಾಕಲಿದೆ ಎಂದರು.
ತಮ್ಮ ವಾಸಸ್ಥಾನಗಳನ್ನು ಸಕ್ರಮಗೊಳಿಸುವಂತೆ ಕೊಳಚೆ ನಿವಾಸಿಗಳು ಪದೇ ಪದೇ ಮನವಿ ಮಾಡುತ್ತಿದ್ದು ಈ ಕುರಿತು ರಾಜ್ಯ ಸರ್ಕಾರ ಎಲ್ಲಾ ಕಾನೂನುಗಳನ್ನು ಪರಿಶೀಲಿಸುತ್ತಿದೆ. ಸ್ಥಳೀಯರ ಮನೆಗಳನ್ನು ಖಾಯಂಗೊಳಿಸುವ ಬಗ್ಗೆ ಪ್ರಕ್ರಿಯೆ ಮುಂದುವರಿದಿದೆ ಎಂದರು.
ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ನಿವಾಸಿಗಳ ಹಕ್ಕುಪತ್ರವನ್ನು ಸಕ್ರಮಗೊಳಿಸುವ ಕಾರ್ಯ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಲ್ಲಿಯವರೆಗೆ 1.11 ಲಕ್ಷ ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು 81,305 ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT