ರಾಜ್ಯ

ಬೆಂಗಳೂರು-ಮೈಸೂರು ರೈಲು ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ

Sumana Upadhyaya
ಬೆಂಗಳೂರು: ಬೆಂಗಳೂರು-ಮೈಸೂರು ರೈಲು ವಿಭಾಗದ ಎಲ್ಲಾ ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ ಸೌಲಭ್ಯ ಸಿಗಲಿದೆ. ಬೆಂಗಳೂರು ನಗರ, ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು, ನಾಯಂಡಹಳ್ಳಿ, ಹೆಜ್ಜಾಲ, ಸೆಟ್ಟಿಹಳ್ಳಿ, ಹಾನಕೆರೆ, ಯಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ ಮತ್ತು ನಾಗೇನಹಳ್ಳಿ ಹೀಗೆ ಒಟ್ಟು 17 ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈಫೈ ಸೌಲಭ್ಯ ದೊರೆಯಲಿದೆ.
ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಸಾರ್ವಜನಿಕ ವಲಯವಾದ ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ವೈಫೈ ಸೌಲಭ್ಯ ಒದಗಿಸಿದೆ. ರೈಲ್ ವೈರ್ ಅಡಿಯಲ್ಲಿ ವೈಫೈ ಸೇವೆಯನ್ನು ಪ್ರಯಾಣಿಕರಿಗೆ ಒದಗಿಸಲಾಗುತ್ತಿದೆ. ಬಳಕೆದಾರರಿಗೆ ಉಚಿತವಾಗಿ ಇಂಟರ್ನೆಟ್ ಸೇವೆ ಒದಗಿಸಲು ಈ ಸೌಲಭ್ಯವನ್ನು ವಿನ್ಯಾಸಗೊಳಿಸಲಾಗಿದೆ. ಸ್ಮಾರ್ಟ್ ಫೋನ್ ಹೊಂದಿರುವವರಿಗೆ ವೈ ಫೈ ಸೌಲಭ್ಯ ದೊರೆಯುತ್ತದೆ.
SCROLL FOR NEXT