ಪ್ರಧಾನಿ ಮೋದಿ 
ರಾಜ್ಯ

ಬೆಂಗಳೂರು ವಿವಿನಲ್ಲಿ ಈಶಾನ್ಯ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್: ನಾಳೆ ಪ್ರಧಾನಿ ಮೋದಿ ಉದ್ಘಾಟನೆ

ಬೆಂಗಳೂರು ವಿಶ್ವವಿದ್ಯಾನಿಲಯವು ಜ್ಞಾನಭಾರತಿ ಆವರಣದಲ್ಲಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಯಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯವು  ಜ್ಞಾನಭಾರತಿ ಆವರಣದಲ್ಲಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಯಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮಾರ್ಚ್ 6ರಂದು ಕಲಬುರ್ಗಿಗೆ  ಆಗಮಿಸಲಿರುವ ಮೋದಿ ಡಿಜಿಟಲ್ ಮಾಧ್ಯಮದ ಮೂಲಕ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಲಿದ್ದಾರೆ.
ಈಶಾನ್ಯ ರಾಜ್ಯಗಳಿಂದ ಶಿಕ್ಷಣಕ್ಕಾಗಿ ಆಗಮಿಸುವ ವಿದ್ಯಾರ್ಥಿನಿಯರಿಗಾಗಿ ಈ ವಿದ್ಯಾರ್ಥಿ ನಿಲಯ ನಿರ್ಮಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕಪೂರ್ವ ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುವ ಆ ಭಾಗದ ವಿದ್ಯಾರ್ಥಿನಿಯರು ಇಲ್ಲಿ ತಂಗಬಹುದಾಗಿದೆ.ವಿದ್ಯಾರ್ಥಿ ನಿಲಯವು  5.5 ಎಕರೆ ಭೂಮಿ ಹೊಂದಿದ್ದು 2,000  ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳುವ ವ್ಯವಸ್ಥೆ ಇದೆ.
ನಾರ್ತ್ ಈಸ್ಟ್ ಕೌನ್ಸಿಲ್ ಸಹಯೋಗದೊಡನೆ  ಇದನ್ನು ನಿರ್ಮಿಸಲಾಗಿದೆ. ಆದರೆ ಈ ವಿದ್ಯಾರ್ಥಿ ನಿಲಯದಲ್ಲೇ ಶೇ. 25 ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಸ್ಥಳೀಯ ವಿದ್ಯಾರ್ಥಿನಿಯರಿಗೆ ಮೀಸಲಿರಿಸಲಾಗಿದೆ.2014 ರಲ್ಲಿ ಹೊಸದಿಲ್ಲಿಯಲ್ಲಿ ಅರುಣಾಚಲ ಪ್ರದೇಶದ ವಿದ್ಯಾರ್ಥಿಗಳು ದಾಳಿಗೊಳಗಾದ ಬಳಿಕ ಈ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ
ವಿದ್ಯಾರ್ಥಿನಿಲಯದ ನಿರ್ಮಾಣದ ಅಂದಾಜು ವೆಚ್ಚ 13 ಕೋಟಿ ರು. ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್