ಕಂಪ್ಲಿ ಶಾಸಕ ಜೆ.ಎನ್. ಗಣೇಶ್ 
ರಾಜ್ಯ

ಈಗಲ್ಟನ್ ರೆಸಾರ್ಟ್ ಪ್ರಕರಣ: ಕಂಪ್ಲಿ ಶಾಸಕ ಗಣೇಶ್ ನ್ಯಾಯಾಂಗ ಬಂಧನ ವಿಸ್ತರಣೆ

ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ

ರಾಮನಗರ: ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ  ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ರಾಮನಗರ ಜಿಲ್ಲಾ ಸಿಜೀಂ ನ್ಯಾಯಾಲಯ ಗಣೇಶ್ ನ್ಯಾಯಾಂಗ ಬಂಧನ ಅವಧಿಯನ್ನು ಮಾರ್ಚ್ 19ರವರೆಗೆ ವಿಸ್ತರಿಸಿ ಆದೇಶಿಸಿದೆ.
ಬುಧವಾರ ಕಂಪ್ಲಿ ಗಣೇಶ್ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು.  ಆದರೆ ಅನಾರೋಗ್ಯದ ನಿಮಿತ್ತ ಶಾಸಕ ಇಂದಿನ ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ನ್ಯಾಯಾಲಯ ಗಣೇಶ್ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.
ಜನವರಿ 20ರಂದು ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ನಡೆದ ಜಗಳದ ವೇಳೆ ಕಂಪ್ಲಿ ಶಾಸಕ ಗಣೇಶ್, ವಿಜಯನಗರ ಶಾಸಕರಾದ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆ ಬಳಿಕ ತಿಂಗಳ ಕಾಲ ನಾಪತ್ತೆಯಾಗಿದ್ದ ಗಣೇಶ್ ಅವರನ್ನು ಗುಜರಾತಿನಲ್ಲಿ ಫೆ. 20ರಂದು ಬಂಧಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT