ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಶಾಲೆಯ ಪ್ರಾಂಶುಪಾಲರಿಂದ ನಿಂದನೆ; ಮನನೊಂದು ಶಿಕ್ಷಕಿ ಆತ್ಮಹತ್ಯೆ

ತಾನು ಕೆಲಸ ಮಾಡುತ್ತಿದ್ದ ಶಾಲೆಯ ಪ್ರಾಂಶುಪಾಲರು ಬೈದದ್ದಕ್ಕೆ ಮನನೊಂದ ಶಿಕ್ಷಕಿಯೊಬ್ಬರು ಮನೆಯ ಸೀಲಿಂಗ್ ಫ್ಯಾನ್ ಗೆ ನೇಣು ಹಾಕಿಕೊಂಡು ...

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಶಾಲೆಯ ಪ್ರಾಂಶುಪಾಲರು ಬೈದದ್ದಕ್ಕೆ ಮನನೊಂದ ಶಿಕ್ಷಕಿಯೊಬ್ಬರು ಮನೆಯ ಸೀಲಿಂಗ್ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಾಳೇನ ಅಗ್ರಹಾರದ ಚರ್ಚ್ ರೋಡ್  ನಿವಾಸಿ ಮದಲೀನಾ  ಬನ್ನೇರು ಘಟ್ಟ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಇಂಗ್ಲೀಷ್ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು, ಎಲ್ ಕೆಜಿ ಯಿಂದ 3ನೇ ತರಗತಿ ವರೆಗೆ ಪಾಠ ಹೇಳಿ ಕೊಡುತ್ತಿದ್ದರು. ಕಳೆದ ಶುಕ್ರವಾರ 2.30ಕ್ಕೆ ಮನೆಗೆ ಅಳುತ್ತಾ ಬಂದರು. ಮಾರ್ಚ್ 1 ರಂದು ಮನೆಯ ಸೀಲಿಂಗ್ ಪ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪತಿ ಫ್ರಾನ್ಸಿಸ್ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
ತನ್ನ ಚೇಂಬರಿಗೆ ಕರೆದ ಪ್ರಾಂಶುಪಾಲರು ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ ಎಂದು ಬೈಯ್ದಿದ್ದಾರೆ. ಸಣ್ಣ ಮಕ್ಕಳಿಗೆ ಪಾಠ ಹೇಳಿಕೊಡಲು ಬರುವುದಿಲ್ಲ ಎಂದ ಮೇಲೆ ಬದುಕುವ ಬದಲು ಎಲ್ಲಾದರೂ ಹೋಗಿ ಸಾಯಿ ಎಂದು  ನಿಂದಿಸಿದ್ದಾಗಿ ತನ್ನ ಬಳಿ ಹೇಳಿದ್ದಾಗಿ ಆಕೆಯ ಪತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಫ್ರಾನ್ಸಿಸ್ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದರು, ಆತನ ಅನಾರೋಗ್ಯದ ಕಾರಣ ಮದಲೀನಾ ಶಾಲೆಯಲ್ಲಿ ಕೆಲಸ ಮಾಡಲು ಆರಂಭಿಸಿದ್ದರು, ಪ್ರಾಂಶುಪಾಲರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಕಾರಣಕ್ಕೆ ಅವರ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗುವುದು ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!