ಸಂಜೀವ್ ಕುಮಾರ್ 
ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ: ರಾಜ್ಯದಲ್ಲಿ 8.53 ಕೋಟಿ ರೂ. ಮೌಲ್ಯದ ಮದ್ಯ, 54 ಲಕ್ಷ ನಗದು ವಶ

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ, ದೇಶಾದಾದ್ಯಂತ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಏರುತ್ತಿದೆ. ಈ ನಡುವೆ ಚುನಾವಣಾ ಆಯೊಗ ನೀತಿ ಸಂಹಿತೆ ಜಾರಿಗೊಳಿಸಿದ್ದು....

ಬೆಂಗಳೂರು: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ, ದೇಶಾದಾದ್ಯಂತ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಏರುತ್ತಿದೆ. ಈ ನಡುವೆ ಚುನಾವಣಾ ಆಯೊಗ ನೀತಿ ಸಂಹಿತೆ ಜಾರಿಗೊಳಿಸಿದ್ದು ಮತದಾರರಿಗೆ ಹಣ, ಹೆಂಡ ಹಂಚುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.  ಇನ್ನು ಕರ್ನಾಟಕದಲ್ಲಿ ನೀತಿ ಸಂಹಿತೆ ಪಾಲನೆಗಾಗಿ ರಚಿಸಲಾದ ಚುನಾವಣಾಧಿಕಾರಿಗಳ ತಂಡ ಈ ವರೆಗೆ 54 ಲಕ್ಷ ರು. ನಗದು ಹಾಗು 8.53 ಕೋಟಿ ರು. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದೆ.
ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. "ನೀತಿ ಸಂಹಿತೆ ಜಾರಿಯಾದಂದಿನಿಂದ ಇಂದಿನವರೆಗೆ ಕರ್ನಾಟಕದಲ್ಲಿ ವರೆಗೆ 54 ಲಕ್ಷ ರು. ನಗದು ಹಾಗು 8.53 ರು. ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 650 ಗ್ರಾಂ ಚಿನ್ನ ಹಾಗೂ 40 ಕೆಜಿ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದು 1818 ಎಕ್ಸೈಸ್ ಪ್ರಕರಣಗಳನ್ನು ದಾಖಲಿಸಲಾಗಿದೆ."
ನಾಗರಿಕರು ನೀತಿ ಸಂಹಿತೆ ಉಲ್ಲಂಘನೆ ಆಗುವುದನ್ನು ಕಂಡುಬಂದರೆ ತಕ್ಷಣವೇ ಸಿ-ವಿಜಿಲ್ ಮೊಬೈಲ್ ಅಪ್ಲಿಕೇಷನ್ ಬಳಸಿಯೇ ದೂರು ನೀಡಬಹುದಾಗಿದೆ ಎಂದು ಸಂಜೀವ್ ಕುಮಾರ್ ಹೇಳಿದ್ದಾರೆ.
"ಸಿ-ವಿಜಿಲ್ ಒಂದು ಆನ್ ಲೈನ್ ಅಪ್ಲಿಕೇಷನ್, ಇದನ್ನು ನಾಗರಿಕರು ಈ ಅಪ್ಲಿಕೇಷನ್ ಬಳಸಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ಕುರಿತು ದೂರು ಸಲ್ಲಿಸಬಹುದು. ಮಾರ್ಚ್ ೧೦ರಿಂದ ಈ ಅಪ್ಲಿಕೇಷನ್ ಚಾಲನೆಯಲ್ಲಿದ್ದು ಇದುವರೀಗೆ ೧೮೬ ದೂರುಗಳ ಸಲ್ಲಿಕೆಯಾಗಿದೆ "ಎಂದೂ ಕುಮಾರ್ ಹೇಳೀದ್ದಾರೆ.
ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಐದು ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಕುಮಾರ್ ಮಾಹಿತಿ ಒದಗಿಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲಿ ಕೇಂದ್ರ ಚುನಾವಣಾ ಆಯೋಗ ಮಾರ್ಚ್ ೧೦ರಿಂದ ದೇಶಾದ್ಯಂತ ನೀತಿ ಸಂಹಿತೆ ಜಾರಿ ಮಾಡಿದೆ.ಏಪ್ರಿಲ್ ೧೧ರಿಂದ ಮೊದಲ ಹಂತದ ಮತದಾನ ಪ್ರಾರಂಬಗೊಳ್ಳಲಿದ್ದು ಮೇ ೨೩ಕ್ಕೆ ಮತಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT