ರಾಜ್ಯ

ಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಪೊಲೀಸ್ ವಶಕ್ಕೆ

Lingaraj Badiger
ಬೆಂಗಳೂರು: ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಿಚಾರಣಾ ನ್ಯಾಯಾಲಯ ಸೋಮವಾರ ಪೊಲೀಸ್ ವಶಕ್ಕೆ ಒಪ್ಪಿಸಿದೆ. 
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ಬಂಧನ ವಾರಂಟ್ ಹಿಂಪಡೆಯುವಂತೆ ಕೋರ್ಟ್ ಗೆ ಮನವಿ ಮಾಡಲು ಬಂದಿದ್ದ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕನನ್ನು ವಶಕ್ಕೆ ಪಡೆಯುವಂತೆ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ್ ಅವರು ಆದೇಶಿಸಿದರು.
ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೋರ್ಟ್ ಗೆ ಹಾಜರಾದ ಬಿ ನಾಗೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತ ಸಾಕ್ಷಿ ವಿಚಾರಣೆ ವೇಳೆ ಸಮನ್ಸ್​ ನೀಡಿದರೂ ಶಾಸಕರಾದ ನಾಗೇಂದ್ರ ಹಾಗೂ ಆನಂದ್​ ಸಿಂಗ್​ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ಕರೆ ತರುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು.
SCROLL FOR NEXT