ಸಾಂದರ್ಭಿಕ ಚಿತ್ರ 
ರಾಜ್ಯ

ಅನೈತಿಕ ಸಂಬಂಧ: ಪತಿ ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನ ಬಂಧನ

ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಸೋಮವಾರ ಯಶವಂತಪುರ ಪೊಲೀಸರು....

ಬೆಂಗಳೂರು: ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಸೋಮವಾರ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ಫೆ.25ರಂದು ಉಮಾಶಂಕರ್ ಎಂಬುವವರು ಮೃತಪಟ್ಟಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತರ ಅಣ್ಣನ ಮಗ ಅಶ್ವಥಪ್ಪ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶವ ಪರೀಕ್ಷೆಯಿಂದ ವ್ಯಕ್ತಿ ಸಂಶಯಾಸ್ಪದವಾಗಿ ಮೃತಪಟ್ಟಿರುವುದು ದೃಢಪಟ್ಟಿತ್ತು.
ಪೊಲೀಸರು ಪತ್ನಿ ಸುಖಿತಾ(30) ಅವರನ್ನು ವಿಚಾರಣೆಗೊಳಪಡಿಸಿದಾಗ ತಾನು ಶ್ರೀನಿವಾಸ್ ಎಂಬುವವರೊಂದಿಗೆ ಅನೈತಿಕ ಸಂಬಂಧ ಹೊಂದಿರುವುದು ಪತಿಗೆ ಗೊತ್ತಾಗಿದ್ದರಿಂದ, ಪ್ರಿಯಕರನ್ನು ರಾತ್ರಿ ಮನೆಗೆ ಕರೆಸಿ ತನ್ನ ಪತಿಯನ್ನು ಉಸಿರುಗಟ್ಟಿ ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಾಳೆ. 
ಆರೋಪಿಗಳಾದ ಪತ್ನಿ ಸುಖಿತಾ(30) ಹಾಗೂ ಪ್ರಿಯಕರ ಶ್ರೀನಿವಾಸ್ (31) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು