ಸಾಂದರ್ಭಿಕ ಚಿತ್ರ 
ರಾಜ್ಯ

ಅಭಿವೃದ್ಧಿ ನಿರ್ಲಕ್ಷ್ಯ: ಗದಗದ 2 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಚುನಾವಣೆ ಮುಗಿದ ನಂತರ ಆಯ್ಕೆಯಾದ ಜನ ಪ್ರತಿನಿಧಿಗಳು ತಮ್ಮ ಹಳ್ಳಿಗಳ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಗದಗದ ಕಡಕೋಳ ಮತ್ತು ...

ಗದಗ: ಚುನಾವಣೆ ಮುಗಿದ ನಂತರ ಆಯ್ಕೆಯಾದ ಜನ ಪ್ರತಿನಿಧಿಗಳು ತಮ್ಮ ಹಳ್ಳಿಗಳ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಗದಗದ ಕಡಕೋಳ ಮತ್ತು ನಾರಾಯಣಪುರ ಗ್ರಾಮಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಸುಮಾರು 8ಸಾವಿರ ಜನಸಂಖ್ಯೆಯಿರುವ ಕಡಕೋಳ ಗ್ರಾಮ ಕಪ್ಪತಗುಡ್ಡದ ಬೆಟ್ಟದಲ್ಲಿದೆ, ಹಲವು ವರ್ಷಗಳಿಂದ ಇಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಕುಡಿಯುವ ನೀರಿನ ಸಮಸ್ಯೆ ಮತ್ತು ಆಸ್ಪತ್ರೆ ಸೌಲಭ್ಯಇಲ್ಲ.
ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲೆಯ ಉನ್ನತ ಅಧಿಕಾರಿಗಳು ಹಲವು ಬಾರಿ ಭರವಸೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಕನಿಷ್ಠ ಮೂಲಭೂತ ಸೌಕರ್ಯಗಳನ್ನು  ಒದಗಿಸಿಲ್ಲ.
ಅಧಿಕಾರಿಗಳ ಬೇಜವಬ್ದಾರಿ ವರ್ತನೆಯಿಂದ ಬೇಸತ್ತಿರುವ ಗ್ರಾಮಸ್ಥರು ಏಪ್ರಿಲ್ 23 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಗ್ರಾಮದಲ್ಲಿಸುಮಾರು  ಮೂರುವರೆ ಸಾವಿರ ಮತಗಳಿವೆ, ಹೀಗಾಗಿ ಇವರ ನಿರ್ಧಾರ ರಾಜಕೀಯ ಪಕ್ಷಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ದಾಂಬಾಲ್ ಬಳಿಯಿರುವ ನಾರಾಣಪುರ ಗ್ರಾಮವನ್ನು ಕಂದಾಯ ಗ್ರಾಮ ಎಂದು ಘೋಷಿಸಬೇಕು ಎಂಬುದು ಇವರ ಬೇಡಿಕೆಯಾಗಿದೆ, ಇಲ್ಲೂ ಕೂಡ ಮೂಲಭೂತ ಸೌಕರ್ಯಗಳಾದ ರಸ್ತೆ,  ಸರಿಯಿಲ್ಲ, ಸುಮಾರು 400 ಜನಸಂಖ್ಯೆಯಿರುವ ಈ ಗ್ರಾಮದಲ್ಲೂ ಕೂಡ ಜನರು ಮತದಾನ ಬಹಿಷ್ಕರಿಸಿದ್ದಾರೆ.
ಹೀರೇವಾದ್ದತ್ತಿ ಮುಖ್ಯರಸ್ತೆಯಿಂದ 3 ಕಿಮೀ ಕ್ರಮಿಸಿದರೇ ಈ ಗ್ರಾಮ ಸಿಗುತ್ತದೆ. ಕೇವಲ ಚುನಾವಣೆ ಸಮೀಪಿಸಿದಾಗ ಮಾತ್ರ ರಾಜಕಾರಣಿಗಳು ಇಲ್ಲಿಗೆ ಆಗಮಿಸುತ್ತಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ