ಬೆಂಗಳೂರು: "ನಿತ್ಯೋತ್ಸವ" ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ಪತ್ನಿ ಶಾನವಾಸ್ ಬೇಗಂ (77) ಶನಿವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿ ಚುಇಕಿತ್ಸೆ ಪಡೆಯುತ್ತಿದ್ದ ನಿಸಾರ್ ಪತ್ನಿ ಬೇಗಂ ಚಿಕಿತ್ಸೆ ಫಲಿಸದೆ ಇಂದು ಅಸುನೀಗಿದ್ದಾರೆ.
ಮೃತರು ಪತಿ ನಿಸಾರ್, ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಶಾಲೆಯೊಂದರ ಮುಖ್ಯ ಶಿಕ್ಷಕಿಯಾಗಿ ನಿವೃತ್ತರಾಗಿದ್ದ ಬೇಗಂ ಅವರೇ ಕವಿ ನಿಸಾರ್ ಅವರ ಎಲ್ಲಾ ಸಾಹಿತ್ಯಾಸಕ್ತಿಗೆ ಪ್ರೇರಣೆಯಾಗಿದ್ದರು.
ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 2 ಗಂಟೆಗೆ ದೂರದರ್ಶನ ಕೇಂದ್ರದ ಸಮೀಪದಲ್ಲಿರುವ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ಹೇಳಿದೆ.