ರಾಜ್ಯ

ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಾನೂನಿನ ಕಟ್ಟುನಿಟ್ಟು ಜಾರಿಗೆ ಮಾಜಿ ಶಾಸಕ ಹೈಕೋರ್ಟ್ ಮೊರೆ

Sumana Upadhyaya
ಬೆಂಗಳೂರು: ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಆದೇಶ ನೀಡಬೇಕೆಂದು ಮಾಜಿ ಶಾಸಕ ಹಾಗೂ ವೃತ್ತಿಯಲ್ಲಿ ವೈದ್ಯರಾಗಿದ್ದ ಡಾ ಸಾರ್ವಭೌಮ ಎಸ್ ಬಗಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನವರಾದ ಮಾಜಿ ಶಾಸಕ ಬಗಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ವಿಭಾಗೀಯ ಪೀಠದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್ ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ವಿಜಯಪುರ ಜಿಲ್ಲೆಯ ಉಪ ಆಯುಕ್ತರಿಗೆ ನೊಟೀಸ್ ಜಾರಿ ಮಾಡಿದ್ದಾರೆ.
ರಾಜ್ಯದಲ್ಲಿ ಅದರಲ್ಲೂ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಜಿಲ್ಲೆಗಳಲ್ಲಿ ಹೆಣ್ಣು ಭ್ರೂಣಹತ್ಯೆಯ ಹೆಚ್ಚಳದ ಬಗ್ಗೆ ತಮ್ಮ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿರುವ ಅವರು, 2016ರ ನವೆಂಬರ್ 8ರಂದು ಸುಪ್ರೀಂ ಕೋರ್ಟ್ ಹೊರಡಿಸಿರುವ ತೀರ್ಪನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.
SCROLL FOR NEXT