ರಾಜ್ಯ

ಬಂಡೀಪುರ ಪ್ರದೇಶದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆಗೆ ಕೇಂದ್ರ ಸರ್ಕಾರ ಶಿಫಾರಸು

Sumana Upadhyaya
ಬೆಂಗಳೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ರಾತ್ರಿ ಸಂಚಾರ ನಿರ್ಬಂಧವನ್ನು ಮುಂದುವರಿಸಲು ಕೇಂದ್ರ ಸರ್ಕಾರ ಶಿಫಾರಸು ಮಾಡಿದ್ದು ಕೇರಳ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಸರ ಮತ್ತು ಅರಣ್ಯ ಸಚಿವಾಲಯ ಜೊತೆಗೆ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ಟು ಸಲ್ಲಿಸಿ ಬಂಡೀಪುರ ರಾಷ್ಟ್ರೀಯ ಹೆದ್ದಾರಿ-212ರಲ್ಲಿ ರಾತ್ರಿ ವೇಳೆ ಸಂಚಾರದ ನಿಷೇಧ ನಿರ್ಬಂಧದ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಾರ್ಯದರ್ಶಿಗಳ ಸಮಿತಿ ಮಾಡಿರುವ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ತನ್ನ ನಿಲುವನ್ನು ತಿಳಿಸಿದೆ.
2010ರಲ್ಲಿ ಕರ್ನಾಟಕ ಹೈಕೋರ್ಟ್ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿಗಳ ಜೀವರಕ್ಷಣೆ ದೃಷ್ಟಿಯಿಂದ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಇದರಿಂದಾಗಿ ಕೇರಳಕ್ಕೆ ಹೋಗುವ ಮತ್ತು ಅಲ್ಲಿಂದ ರಾತ್ರಿ 9 ಗಂಟೆ ಮೇಲೆ ಬರುವ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ನಿರ್ಬಂಧವನ್ನು ಕೇರಳ ಸರ್ಕಾರ ವಿರೋಧಿಸಿತ್ತು.
SCROLL FOR NEXT